ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಡೀ ವಿಶ್ವದಲ್ಲಿ ಭಾರೀ ಸದ್ದು ಮಾಡುತ್ತಿದೆ ರಿಷಬ್ ಶೆಟ್ಟಿ ನಿರ್ದೇಶನ ಮಾಡಿ ನಟಿಸಿರುವ ಕಾಂತಾರ ಸಿನಿಮಾ . ಸೆಪ್ಟಂಬರ್ 30ರಂದು ತೆರೆಗೆ ಬಂದ ಸಿನಿಮಾ ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ. ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ.
ಚಿತ್ರ ವೀಕ್ಷಿಸಿದ ಪ್ರೇಕ್ಷಕರು ಸಾಮಾಜಿಕ ಜಾಲತಾಣದಲ್ಲಿ ಚಿತ್ರದ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ. ಕರಾವಳಿಯ ಆಚಾರ ವಿಚಾರಗಳು ಪ್ರೇಕ್ಷಕರ ಹೃದಯ ಗೆದ್ದಿದೆ.
Just watched Kantara and I’m just at a loss of words. A brilliant masterpiece by @shetty_rishab hats off to the entire team 🤟🏽🥳 pic.twitter.com/538dJinRCX
— Sanvi sudeep (@iamsanvisudeep) October 2, 2022
ಸದ್ಯ ಕಾಂತಾರ ಸಿನಿಮಾ ವೀಕ್ಷಿಸಿ ಸ್ಯಾಂಡಲ್ ವುಡ್ನ ಖ್ಯಾತ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಸುದೀಪ್ ತುಂಬಾ ಖುಷಿ ವ್ಯಕ್ತಪಡಿಸಿದ್ದಾರೆ.
ಕಾಂತಾರ ಬಗ್ಗೆ ಹೇಳಿರುವ ಸಾನ್ವಿ, ‘ಈಗಷ್ಟೆ ಕಾಂತಾರ ಸಿನಿಮಾ ವೀಕ್ಷಿಸಿದೆ. ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ರಿಷಬ್ ಶೆಟ್ಟಿ ಅವರಿಂದ ಅದ್ಭುತವಾದ ಮಾಸ್ಟರ್ ಪೀಸ್. ಇಡೀ ತಂಡಕ್ಕೆ ಹ್ಯಾಟ್ಸಾಫ್’ ಎಂದು ಹೇಳಿದರು.