ಹೊಸದಿಗಂತ ಡಿಜಿಟಲ್ ಡೆಸ್ಕ್
ಉದ್ಯಮಿ ಮುಕೇಶ್ ಅಂಬಾನಿ ಕುಟುಂಬಕ್ಕೆ ಮತ್ತೆ ಬೆದರಿಕೆ ಬಂದಿದ್ದು, ಮುಂಬೈನ ಸರ್ ಹೆಚ್ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಲ್ಯಾಂಡ್ ಲೈನ್ ನಂಬರ್ಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ.
ಡಿಬಿ ಮಾರ್ಗ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಇಂದು ಮಧ್ಯಾಹ್ನ ಬೆದರಿಕೆ ಕರೆ ಮಾಡಲಾಗಿದೆ. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆ ಸ್ಫೋಟಿಸುವುದಾಗಿ ಹಾಗೂ ಅಂಬಾನಿ ಕುಟುಂಬದ ಕೆಲವರ ಹೆಸರು ಹೇಳಿ ಬೆದರಿಕೆ ಹಾಕಲಾಗಿದೆ.
ಈ ಬಗ್ಗೆ ಅಪರಿಚಿತ ವ್ಯಕ್ತಿಯ ವಿರುದ್ಧ ಡಿಬಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಮುಂಬೈ ಪೊಲೀಸರು ಹೆಚ್ಚಿನ ತನಿಖೆಗೆ ಮುಂದಾಗಿದ್ದಾರೆ.