ಹೊಸದಿಗಂತ ಡಿಜಿಟಲ್ ಡೆಸ್ಕ್
ಟಿ20 ರ್ಯಾಂಕಿಂಗ್ ಪಟ್ಟಿಯಲ್ಲಿ ಸೂರ್ಯ ಕುಮಾರ್ ಯಾದವ್ ಎರಡನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ ಪಾಕಿಸ್ತಾನದ ರಿಜ್ವಾನ್ ಇದ್ದಾರೆ. ಇಬ್ಬರ ನಡುವೆ 16 ಅಂಕಗಳ ಅಂತರ ಇದೆ.
ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ 6 ಪಂದ್ಯಗಳನ್ನು ಆಡಿರುವ ಸೂರ್ಯ 838 ಅಂಕಗಳಿಂದ ಎರಡನೇ ಸ್ಥಾನ ಅಂಕರಿಸಿದ್ದಾರೆ. ರಿಜ್ವಾನ್ 854 ರೇಟಿಂಗ್ನಿಂದ ಮೊದಲ ಸ್ಥಾನ ಅಲಂಕರಿಸಿದ್ದಾರೆ.
ಕೆ ಎಲ್ ರಾಹುಲ್, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಕ್ರಮವಾಗಿ 14, 15, 16 ನೇ ಸ್ಥಾನದಲ್ಲಿದ್ದಾರೆ. ಬೌಲಿಂಗ್ನಲ್ಲಿ ಟಾಪ್ ಟೆನ್ ಸ್ಥಾನದಲ್ಲಿ ಯಾರು ಇಲ್ಲ. 12ನೇ ಸ್ಥಾನದಲ್ಲಿ ಭುವನೇಶ್ವರ್ ಕುಮಾರ್ ಇದ್ದಾರೆ. ಆಲ್ರೌಂಡರ್ ವಿಭಾಗದಲ್ಲಿ ಹಾರ್ದಿಕ್ ಪಾಂಡ್ಯ ಐದನೇ ಸ್ಥಾನದಲ್ಲಿದ್ದಾರೆ. ತಂಡಗಳ ರ್ಯಾಂಕಿಂಗ್ನಲ್ಲಿ ಭಾರತ 268 ಅಂಕಗಳೊಂದಿಗೆ ಮೊದಲ ಹಾಗೂ ನಂತರದಲ್ಲಿ ಇಂಗ್ಲೆಂಡ್ 262 ಎರಡನೇ ಸ್ಥಾನದಲ್ಲಿದೆ.