ಓಲಾ, ಉಬರ್ ಟ್ಯಾಕ್ಸಿ ಸಂಸ್ಥೆಗಳಿಗೆ ಸಾರಿಗೆ ಇಲಾಖೆಯಿಂದ ಬಿಗ್ ಶಾಕ್ !

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡಿ ಆಟೋರಿಕ್ಷಾ ಸೇವೆ ನೀಡುತ್ತಿದ್ದ ಆ್ಯಪ್ ಆದಾರಿತ ಓಲಾ, ಉಬರ್ ಟ್ಯಾಕ್ಸಿ ಸಂಸ್ಥೆಗಳಿಗೆ ಸಾರಿಗೆ ಇಲಾಖೆ ಶಾಕ್ ನೀಡಿದೆ. ಕಾನೂನು ಬಾಹಿರವಾಗಿ ಲೈಸೆನ್ಸ್ ಪಡೆಯದೇ ನಡೆಸುತ್ತಿದ್ದ ಆಟೋರಿಕ್ಷಾ ಸೇವೆಯನ್ನು ತಕ್ಷಣದಿಂದಲೇ ನಿಲ್ಲಿಸುವಂತೆ ಸಾರಿಗೆ ಇಲಾಖೆ ಆದೇಶ ನೀಡಿದೆ.

Ola uber auto stop ಸಾರಿಗೆ ಇಲಾಖೆಯ ಆದೇಶ ಪ್ರತಿಆ್ಯಪ್ ಆಧಾರಿತ ಟ್ಯಾಕ್ಸಿ ಸೆವೆ ಒದಗಿಸುತ್ತಿದ್ದ ಓಲಾ, ಉಬರ್ ಸಂಸ್ಥೆಗಳು ಆಟೋ ಸಂಚಾರಕ್ಕೆ ಸಾರಿಗೆ ಇಲಾಖೆಯಿಂದ ಪರವಾನಗಿ ಪಡೆಯದೇ ಆಟೋ ಸಂಚಾರ ಸೇವೆ ಒದಗಿಸುತ್ತಿರುವುದು ಕಾನೂನುಬಾಹಿರವಾಗಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.
Ola uber auto stop ಸಾರಿಗೆ ಇಲಾಖೆಯ ಆದೇಶ ಪ್ರತಿಬೆಂಗಳೂರು ನಗರದಲ್ಲಿ ಆಟೋ ಸಂಚಾರಕ್ಕೆ ಕನಿಷ್ಟ ದರ 30 ರೂ. ನಿಗದಿಪಡಿಸಲಾಗಿದ್ದರೂ ಆ್ಯಪ್ ಆಧಾರಿತ ಅಗ್ರಿಗೆಟರ್​​ಗಳು ಕನಿಷ್ಠ ದರವಾಗಿ 100 ರೂ.ವನ್ನು ಪ್ರಯಾಣಿಕರಿಂದ ವಸೂಲು ಮಾಡುತ್ತಿರುವುದಕ್ಕೆ ಸಾರಿಗೆ ಇಲಾಖೆ ಆಕ್ಷೇಪ ವ್ಯಕ್ತಪಡಿಸಿ ಓಲಾ, ಉಬರ್ ಟ್ಯಾಕ್ಸಿ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದೆ.

ಹೆಚ್ಚಿನ ದರವನ್ನು ವಸೂಲು ಮಾಡುತ್ತ ಕಾನೂನು ಬಾಹಿರವಾಗಿ ಆಟೋರಿಕ್ಷಾ ಸೇವೆ ಒದಗಿಸುತ್ತಿರುವ ಬಗ್ಗೆ 3 ದಿನಗಳಲ್ಲಿ ಸಾರಿಗೆ ಇಲಾಖೆಗೆ ವಿವರ ನೀಡುವಂತೆ ನೋಟಿಸ್​ನಲ್ಲಿ ಸೂಚಿಸಲಾಗಿದೆ.

ಆ್ಯಪ್ ಆಧಾರಿತ ಅಗ್ರಿಗೆಟರ್​ಗಳಿಗೆ ಟ್ಯಾಕ್ಸಿ ಸೇವೆ ಒದಗಿಸಲು ಮಾತ್ರ ರಾಜ್ಯ ಸರ್ಕಾರ ಪರವಾನಗಿ ನೀಡಿದೆ. ಇದರ ಹೊರತಾಗಿ ಟ್ಯಾಕ್ಸಿ ಲೈಸೆನ್ಸ್​ನ ಹೆಸರಲ್ಲಿ ಆಟೋ ರಿಕ್ಷಾ ಸೇವೆ ನೀಡಲು ಕಾನೂನಿನಲ್ಲಿ ಅವಕಾಶ ಇರುವುದಿಲ್ಲ ಎಂದು ರಾಜ್ಯ ರಸ್ತೆ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ ಹಾಗೂ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ನೋಟಿಸ್ ನಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!