ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರಕಾರ ಸಿಹಿ ಸುದ್ದಿ ನೀಡಿದೆ. ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆ ಹೆಚ್ಚಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ.
ಆದೇಶ ಪ್ರತಿರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರಿಗೆ ಶೇ.3.75ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದ್ದು, ಜುಲೈ 1ರಿಂದಲೇ ತುಟ್ಟಿ ಭತ್ಯೆ ಅನ್ವಯವಾಗುವಂತೆ ಮುಖ್ಯಮಂತ್ರಿ ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ 1,282.72 ಕೋಟಿ ರೂ. ಭರಿಸಲಿದೆಬಿ ಆದೇಶ ಪ್ರತಿ ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.
ಸನ್ಮಾನ್ಯ ಮುಖ್ಯಮಂತ್ರಿ @BSBommai ಅವರು ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿ. 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ.
— CM of Karnataka (@CMofKarnataka) October 7, 2022