ಹೊಸದಿಗಂತ ವರದಿ ಕೊಪ್ಪಳ:
ಅ.10 ರಂದು ಮಧ್ಯಾಹ್ನ 3 ಗಂಟೆಗೆ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಅವರು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ್ ತಂಗಡಗಿ ಹೇಳಿದರು. ನಗರದ ಮೀಡಿಯಾ ಕ್ಲಬ್ ನಲ್ಲಿ ಶನಿವಾರ ಮಾತನಾಡಿದ ಅವರು, ಅ.15 ರಂದು ಭಾರತ್ ಜೋಡೋ ಪಾದಯಾತ್ರೆ ಬಳ್ಳಾರಿಗೆ ಬರಲಿದ್ದು, ಸಮಾವೇಶ ನಡೆಯಲಿದೆ.
ಈ ನಿಟ್ಟಿನಲ್ಲಿ ಸೋಮವಾರ ಕೊಪ್ಪಳದ ಶಿವಶಾಂತವೀರ ಕಲ್ಯಾಣ ಮಂಟಪದಲ್ಲಿ ಪದಾಧಿಕಾರಿಗಳ ಪೂರ್ವ ಭಾವಿ ಸಭೆ ನಡೆಯಲಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಗಮಿಸಲಿದ್ದಾರೆ ಎಂದರು.
ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ಸೇರಿ 1 ಸಾವಿರ ಮಂದಿ ಭಾಗವಹಿಸಲಿದ್ದಾರೆ. ಬಳಿಕ ಜಿಲ್ಲೆಯ ಮಾಜಿ ಸಚಿವರು, ಶಾಸಕರ ಸಭೆ ನಡೆಯಲಿದೆ ಎಂದರು.