ಹೊಸದಿಗಂತ ವರದಿ, ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ (ಅ.8) 7 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. 11 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಶನಿವಾರ ಸಾವು ಸಂಭವಿಸಿಲ್ಲ. ಈ ತನಕ ಜಿಲ್ಲೆಯಲ್ಲಿ 1,860 ಮಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಈ ವರೆಗೆ ಗುಣಮುಖರಾದವರ ಸಂಖ್ಯೆ 1,35,186 ಮಂದಿ. 30 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಶೇ.1.48 ಪಾಸಿಟಿವಿಟಿ ದರ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ