ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ಟೋಬರ್ 21ರಂದು ನಡೆಯುವ ಗಂಧದ ಗುಡಿ ಪ್ರೀ ರಿಲೀಸ್ ಈವೆಂಟ್‌ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್‌ಕುಮಾರ್ ಅವರಿಗೆ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಳ್ಳುವಂತೆ ರಾಜ್‌ಕುಮಾರ್ ಕುಟುಂಬ ಮನವಿ ಮಾಡಿದ್ದು, ಕಾರ್ಯಕ್ರಮದಲ್ಲಿ ಭಾರತೀಯ ಚಿತ್ರರಂಗದ ಅನೇಕ ದಿಗ್ಗಜರು ಪಾಲ್ಗೊಳ್ಳಲಿದ್ದಾರೆ.
ಆಮಂತ್ರಣ ಪತ್ರಿಕೆ ಮರದಿಂದ ಮಾಡಲಾಗಿದ್ದು, ಪುನೀತ್ ಪುತ್ಥಳಿ ಇದೆ. ಶ್ರೀಗಂಧದ ತುಂಡಿನ ಮೇಲೆ ಪುನೀತ್ ರಾಜ್‌ಕುಮಾರ್ ಎಂದು ಬರೆದಿರುವ ಹಸ್ತಾಕ್ಷರ ಇದೆ.