ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ವರ್ಷ ಭಾರತೀಯ ಸೇನಾ ದಿನದ ಪರೇಡ್ ನ ಆತಿಥ್ಯವನ್ನು ಬೆಂಗಳೂರು ವಹಿಸಲಿದೆ.
ಈ ಕುರಿತು ಮಾಹಿತಿ ನೀಡಿದ ಭಾರತೀಯ ಸೇನಾ ಪರೇಡ್ ಅಧಿಕಾರಿಗಳು,ಪ್ರತಿ ವರ್ಷ ಜನವರಿ 15 ರಂದು ದೆಹಲಿಯಲ್ಲಿ ಸಾಂಪ್ರದಾಯಿಕವಾಗಿ ಪರೇಡ್ ನಡೆಯುತ್ತದೆ. ಆದರೆ ಈ ಬಾರಿ ಬೆಂಗಳೂರು ಆತಿಥ್ಯ ವಹಿಸಲಿದೆ.
1949ರ ಜನವರಿ 15ರಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ಭಾರತೀಯ ಸೇನೆಯ ಮೊದಲ ಭಾರತೀಯ ಕಮಾಂಡರ್-ಇನ್-ಚೀಫ್ ಆಗಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಸೇನಾ ದಿನವನ್ನು ಆಚರಿಸಲಾಗುತ್ತದೆ.
ಸಾಂಪ್ರದಾಯಿಕವಾಗಿ ದೆಹಲಿ ಕಂಟೋನ್ಮೆಂಟ್ ನ ಕಾರ್ಯಪ್ಪ ಪರೇಡ್ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯುತ್ತದೆ. ಮುಂದಿನ ವರ್ಷ ಜನವರಿಯಲ್ಲಿ ಬೆಂಗಳೂರಿನಲ್ಲಿ ಭಾರತೀಯ ಸೇನಾ ದಿನದ ಪರೇಡ್ ನಡೆಯಲಿದೆ.ಮುಂದಿನ ವರ್ಷದಿಂದ ರೊಟೇಶನ್ ಆಧಾರದ ಮೇಲೆ ಪ್ರತಿವರ್ಷ ವಿವಿಧ ಸ್ಥಳಗಳಲ್ಲಿ ಮೆರವಣಿಗೆ ನಡೆಯಲಿದೆ ಎಂದು ವರದಿಗಳು ತಿಳಿಸಿವೆ.