ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ಮೋದಿ ವಿರುದ್ಧ ವಿವಾದಿತ ಹೇಳಿಕೆ ನೀಡಿದ ಆರೋಪದ ಮೇಲೆ ಗುಜರಾತ್ನ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಗೋಪಾಲ್ ಇಟಾಲಿಯಾ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಗೊಂಡಿದ್ದಾರೆ.
ಮಹಿಳೆಯರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಕ್ಕಾಗಿ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು)ಇಟಾಲಿಯಾ ಅವರಿಗೆ ಸಮನ್ಸ್ ನೀಡಿತ್ತು. ಇದರ ಹಿನ್ನೆಲೆಯಲ್ಲಿ ಗುರುವಾರ ಗೋಪಾಲ್ ಇಟಾಲಿಯಾ ಮಹಿಳಾ ಆಯೋಗ ಕಚೇರಿಗೆ ಬಂದಿದ್ದರು. ಈ ವೇಳೆ ದೆಹಲಿ ಪೊಲೀಸರು ಗೋಪಾಲ್ ಇಟಾಲಿಯಾ ವಶಕ್ಕೆ ಪಡೆದು ಆಗ್ನೇಯ ದೆಹಲಿಯ ಸರಿತಾ ವಿಹಾರ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.
ಸದ್ಯಕ್ಕೆ ಗೋಪಾಲ್ ಇಟಾಲಿಯಾ ವಶಕ್ಕೆ ಪಡೆದಿರುವ ಕುರಿತಾಗಿ ಅಧಿಕಾರಿಗಳು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ಇತ್ತೀಚೆಗೆ ಗೋಪಾಲ್ ಇಟಾಲಿಯಾ ಅವರು ಎರಡು ಹಳೆಯ ವಿಡಿಯೋಗಳು ವೈರಲ್ ಆಗಿದ್ದವು. ಅದರಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರದ್ದು ನೀಚ ರಾಜಕೀಯ ಎಂದು ಟೀಕಿಸಿದ್ದರು.