Tuesday, November 25, 2025

ಥಾಣೆಯಲ್ಲಿ ಭೀಕರ ಅಪಘಾತ: ನಾಲ್ವರು ಸಾವು, ಫ್ಲೈಓವರ್​ನಿಂದ ಕೆಳಗೆ ಬಿದ್ದ ವ್ಯಕ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿರುವ ಅಂಬರ್ನಾಥ್ ಫ್ಲೈಓವರ್ ಮೇಲೆ ಭೀಕರ ಅಪಘಾತವೊಂದು ಸಂಭವಿಸಿದೆ. ಟಾಟಾ ನೆಕ್ಸಾನ್ ಕಾರು ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಹಲವಾರು ಬೈಕ್​ಗಳಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಎಷ್ಟು ಭೀಕರವಾಗಿತ್ತೆಂದರೆ, ಕಾರು ಚಾಲಕ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇತರ ನಾಲ್ವರು ಗಂಭೀರವಾಗಿ ಗಾಯಗೊಂಡರು. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದ ಚೌಬೆ ಅವರ ಪತ್ನಿ ಸುಮನ್ ಚೌಬೆ ಕೂಡ ಗಾಯಗೊಂಡಿದ್ದಾರೆ. ಚಾಲಕನಿಗೆ ಹಠಾತ್ ಹೃದಯಾಘಾತ ಸಂಭವಿಸಿರಬಹುದು ಅಥವಾ ಮದ್ಯದ ನಶೆಯಲ್ಲಿರಬಹುದು ಎಂದು ಅಂದಾಜಿಸಲಾಗಿದೆ. ಫ್ಲೈಓವರ್​ನಿಂದ ಒಬ್ಬರ ದೇಹ ಕೆಳಗೆ ಬಿದ್ದಿರುವುದು ವಿಡಿಯೋದಲ್ಲಿ ಕಾಣಬಹುದು.

error: Content is protected !!