ಹೊಸದಿಗಂತ ವರದಿ, ಬಳ್ಳಾರಿ:
ಯುವ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆ ನಗರಕ್ಕೆ ಬೆಳಿಗ್ಗೆ ಪ್ರವೇಶಿಸಿತು. ಬೆಂಗಳೂರು ರಸ್ತೆಯ ಎರಡೂ ಬದಿ ವಾಹನಗಳು ಸಾಲುಟ್ಟಿ ನಿಂತಿದ್ದವು, ಬೆಂಗಳೂರು ಮಾರ್ಗಕ್ಕೆ ತೆರಳುವ ವಾಹನ ಸವಾರರು, ಬೆಂಗಳೂರು ಮೂಲಕ ಬಳ್ಳಾರಿ ಗೆ ಆಗಮಿಸುವ ಸವಾರರು ಸುಮಾರು ಗಂಟೆಗಳ ಕಾಲ ಪರದಾಡಿದರು. ಯಾತ್ರೆ ಹಿನ್ನೆಲೆ ಸುಮಾರು 50ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದು, ಸುಗಮ ಸಂಚಾರಕ್ಕೆ ಅಡ್ಡಿಯಾಯಿತು. ಜಯನಗರ ಕ್ಷೇತ್ರದ ಶಾಸಕಿ ಸೌಮ್ಯ ರೆಡ್ಡಿ ಅವರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಮುಖ್ಯವೇದಿಕೆಗೆ ತೆರಳಲು ಕೆಲ ಕಾಲ ಪರದಾಡಿದರು. ನಂತರ ಪೊಲೀಸರು ಮದ್ಯಪ್ರವೇಶಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.
ಶಾಲಾ ಕಾಲೇಜು ರಜೆ ಘೋಷಣೆ:
ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಯಾತ್ರೆಯಲ್ಲಿ ಸಾವಿರಾರು ಜನರು ಭಾಗವಹಿಸುತ್ತಿರುವ ಹಿನ್ನೆಲೆ ಸಹಜವಾಗಿ ಟ್ರಾಫಿಕ್ ಜಾಮ್ ಉಂಟಾಗಲಿದೆ, ಮಕ್ಕಳ ಸುರಕ್ಷತೆ ದೃಷ್ಟಿ ಇಟ್ಟುಕೊಂಡು, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ