ಹೊಸದಿಗಂತ ವರದಿ, ವಿಜಯಪುರ:
ಜಿಲ್ಲೆಯ ಕೊಲ್ಹಾರ ಸಮೀಪದ ರಾಷ್ಟ್ರೀಯ ಹೆದ್ದಾರಿ- 218 ರ ಹಳ್ಳದ ಗೆಣ್ಣೂರು ಕ್ರಾಸ್ ಹತ್ತಿರ ಲಾರಿ ಹಾಗೂ ಸಾರಿಗೆ ಬಸ್ ಮುಖಾಮುಖಿ ಡಿಕ್ಕಿಯಾಗಿ ಲಾರಿ ಮತ್ತು ಬಸ್ ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಹುಬ್ಬಳ್ಳಿ ಕಡೆಯಿಂದ ವಿಜಯಪುರಕ್ಕೆ ಹೊರಟ ಸಾರಿಗೆ ಬಸ್ (ಕೆಎ- 28 ಎಫ್ 1996) ಹಾಗೂ ವಿಜಯಪುರದಿಂದ ಹುಬ್ಬಳ್ಳಿ ಕಡೆಗೆ ಹೊರಟ ಹರಿಯಾಣ ಮೂಲದ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಬಸ್ ನಲ್ಲಿರುವ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗೆ ಆಸ್ಪತ್ರೆಗೆ ರವಾನಿಸಲಾಗಿದೆ.
ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.