ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯ ವರುಣನ ಆರ್ಭಟ ಜೋರಾಗಿದೆ. ನಗರದ ಹಲವೆಡೆ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುತ್ತಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಶಿವಾನಂದ ಸರ್ಕಲ್, ಮಲ್ಲೇಶ್ವರಂ, ರಾಜಾಜಿನಗರ, ಮೆಜೆಸ್ಟಿಕ್, ಕಾರ್ಪೋರೇಷನ್, ಶಿವಾಜಿನಗರ, ಯಶವಂತಪುರ ಸೇರಿದಂತೆ ಹಲವೆಡೆ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಸಂಜೆಯಾಗುತ್ತಿದ್ದಂತೆ ಮೋಡ ಕವಿದ ವಾತಾವರಣ ಜೊತೆಗೆ ವರುಣನ ಆರ್ಭಟ ಶುರುವಾಗಿದ್ದು, ಮಳೆ ಅಬ್ಬರ ಹಾಗೂ ಟ್ರಾಫಿಕ್ ಜಾಮ್‌ಗೆ ವಾಹನ ಸವಾರರು ಸಿಲುಕಿದ್ದಾರೆ.
ಈಗಾಗಲೇ ಹವಾಮಾನ ಇಲಾಖೆ 2 ದಿನಗಳ ಕಾಲ ಮಳೆಯ ಮುನ್ಸೂಚನೆ ನೀಡಿದೆ.