Tuesday, November 25, 2025

ಮದುವೆ ಮೇಕಪ್‌ಗಾಗಿ ಹೊರಟಿದ್ದ ವಧುಗೆ ಅಪಘಾತ: ಐಸಿಯುನಲ್ಲೇ ತಾಳಿ ಕಟ್ಟಿದ ವರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತವಾಗಿ ಆಸ್ಪತ್ರೆಯ ಐಸಿಯುನಲ್ಲೇ ವರ ತಾಳಿ ಕಟ್ಟಿದ ಅಪರೂಪದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ.

ಕೇರಳದ ಆಲಪ್ಪುಳದ ಥುಂಬೋಳಿಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಆಳಪ್ಪುಳ ನಿವಾಸಿ ಅವನಿ ಹಾಗೂ ಥುಂಬೋಳಿ ನಿವಾಸಿ ಶರೋನ್ ವಿವಾಹ ಶುಕ್ರವಾರ ನಿಗದಿಯಾಗಿತ್ತು.

ಈ ಹಿನ್ನೆಲೆ ವಧು ಅವನಿ ಮೇಕಪ್ ಮಾಡಿಸಿಕೊಳ್ಳಲೆಂದು ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವನಿಯ ಬೆನ್ನುಮೂಳೆಗೆ ತೀವ್ರ ಗಾಯವಾಗಿ ವಿಪಿಎಸ್ ಲೇಕ್‌ಶೋರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಸ್ಪತ್ರೆಗೆ ಬಂದ ಶರೋನ್ ಹಾಗೂ ಅವನಿ ಕುಟುಂಬಸ್ಥರು ಪೂರ್ವ ನಿಗದಿಯಾಗಿದ್ದಂತೆ ಶುಕ್ರವಾರ ಮಧ್ಯಾಹ್ನ 12:15 ರಿಂದ 12:30ರ ನಡುವೆ ಮದುವೆ ನೆರವೇರಿಸಲು ಅವಕಾಶ ಕಲ್ಪಿಸುವಂತೆ ಆಸ್ಪತ್ರೆಯವರಲ್ಲಿ ಮನವಿ ಮಾಡಿದ್ದರು. ಅದರಂತೆ ಆಸ್ಪತ್ರೆಯ ಐಸಿಯುನಲ್ಲೇ ಶರೋನ್ ಅವನಿ ಕುತ್ತಿಗೆಗೆ ತಾಳಿ ಕಟ್ಟಿದ್ದಾರೆ. ಕುಟುಂಬ ಸದಸ್ಯರು ಈ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.

error: Content is protected !!