ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮೆಕ್ಕೆಜೋಳ ಮತ್ತು ಹೆಸರುಕಾಳು ಬೆಳೆಯ ಬೆಲೆಗಳ ತೀವ್ರ ಕುಸಿತದ ಬಗ್ಗೆ ಗಾಢ ಆತಂಕ ಮತ್ತು ತುರ್ತು ಗಮನ ಹರಿಸುವ ಉದ್ದೇಶ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಾಗಿ ಪತ್ರದಲ್ಲಿ ವಿವರಿಸಿದ್ದು, ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಅಗತ್ಯ ಕ್ರಮಕೈಗೊಳ್ಳುವಂತೆ ವಿನಂತಿಸಿದ್ದಾರೆ.
ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ, ಕರ್ನಾಟಕದಲ್ಲಿ ಮೆಕ್ಕೆ ಜೋಳ ಮತ್ತು ಹೆಸರುಕಾಳು (ಮೂಂಗ್) ಬೆಳೆಯ ಬೆಲೆಗಳ ತೀವ್ರ ಕುಸಿತದ ಬಗ್ಗೆ ಗಾಢ ಆತಂಕ ಮತ್ತು ತುರ್ತು ಗಮನ ಹರಿಸುವ ಉದ್ದೇಶದಿಂದ ನಿಮಗೆ ಈ ಪತ್ರ ಬರೆಯುತ್ತಿದ್ದೇನೆ. ಇವು ಲಕ್ಷಾಂತರ ರೈತರ ಜೀವನಕ್ಕೆ ಆಧಾರವಾಗಿರುವ ಬೆಳೆಗಳಾಗಿವೆ. ಭಾರತ ಸರ್ಕಾರ ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆಗಿಂತ (MSP) ಗಣನೀಯವಾಗಿ ಕಡಿಮೆಯಾದ ಮಾರುಕಟ್ಟೆ ಬೆಲೆಗಳು ರೈತರಲ್ಲಿ ದೊಡ್ಡ ಆತಂಕವನ್ನು ಸೃಷ್ಟಿಸಿವೆ ಎಂದಿದ್ದಾರೆ.
ಮೆಕ್ಕೆಜೋಳ, ಹೆಸರುಕಾಳು ಬೆಲೆ ಕುಸಿತ: ಪ್ರಧಾನಿಗೆ ಸಿಎಂ ಪತ್ರ

