ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ 9,500 ಪ್ರತಿನಿಧಿಗಳು ಮತ ಚಲಾಯಿಸಿದ್ದು, ಶೇ.96ರಷ್ಟು ಮತದಾನವಾಗಿದೆ ಎಂದು ಪಕ್ಷದ ಚುನಾವಣಾ ಸಮಿತಿ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ತಿಳಿಸಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕರಾದ ಶಶಿ ತರೂರ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು 24 ವರ್ಷಗಳ ಬಳಿಕ ಗಾಂಧಿಯೇತರ ಅಧ್ಯಕ್ಷರಾಗಲು ಸಜ್ಜಾಗಿದ್ದುದ್ದು, ಇದೀಗ ಮತದಾನ ಅಂತ್ಯವಾಗಿದೆ.
ಬೆಳಿಗ್ಗೆ 10 ಗಂಟೆಗೆ ಎಐಸಿಸಿ ಕೇಂದ್ರ ಕಚೇರಿ ಮತ್ತು ದೇಶಾದ್ಯಂತದ ಸರ್ಕಾರಿ ಕಚೇರಿಗಳಲ್ಲಿ ಪಕ್ಷವು ಸ್ಥಾಪಿಸಿದ ಮತಗಟ್ಟೆಗಳಲ್ಲಿ ಮತದಾನ ಪ್ರಾರಂಭವಾಯಿತು.
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನ ಕಾರ್ಯದರ್ಶಿ ಸೋನಿಯಾ ಗಾಂಧಿ ಮತ್ತು ಇತರ ಪ್ರತಿನಿಧಿಗಳು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕೇಂದ್ರ ಕಚೇರಿಗೆ ತೆರಳಿ ರಹಸ್ಯ ಮತದಾನದ ಮೂಲಕ ಮತ ಚಲಾಯಿಸಿದರು.
9,000 ಕ್ಕೂ ಹೆಚ್ಚು ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಪ್ರತಿನಿಧಿಗಳು ದೇಶಾದ್ಯಂತದ ರಾಜ್ಯ ಕಚೇರಿಗಳಲ್ಲಿನ ಪಕ್ಷದ ಮತಗಟ್ಟೆಗಳಲ್ಲಿ ಮತ ಚಲಾಯಿಸಿದರು. ಶೇ.96ರಷ್ಟು ಮತದಾನವಾಗಿದೆ ಎಂದು ಪಕ್ಷದ ಚುನಾವಣಾ ಆಯೋಗದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಹೇಳಿದ್ದಾರೆ.