ಹೊಸದಿಗಂತ ಡಿಜಿಟಲ್ ಡೆಸ್ಕ್:
ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ಎಲ್ಲೆಡೆ ಅಬ್ಬರಿಸುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅಭಿಮಾನಿಗಳನ್ನು ತಲುಪಿದೆ. ಹಿಂದಿಯಲ್ಲೂ ಕಾಂತಾರ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭರ್ಜರಿ ಕಲೆಕ್ಷನ್ ಮಾಡುತ್ತಿದೆ.
ಈಗಾಗಲೇ ಪ್ರೇಕ್ಷಕರು ಮಾತ್ರವಲ್ಲದೇ ಸಿನಿ ಸೆಲೆಬ್ರಿಟಿಗಳು ಸಹ ಕಾಂತಾರ ಸಿನಿಮಾಗೆ ಫಿದಾ ಆಗಿದ್ದಾರೆ. ಇದೀಗ ಕಾಂತಾರ ನಟಿ ಕಂಗನಾ ರಣಾವತ್ ಸಿನಿಮಾ ನೋಡಲು ಕಾಯುತ್ತಿದ್ದೀನಿ ಎಂದು ಹೇಳಿದ್ದಾರೆ.
ಇನ್ಸ್ಟಾಗ್ರಾಮ್ ಸ್ಟೇಟಸ್‌ನಲ್ಲಿ ಕಂಗನಾ ಕಾಂತಾರ ಸಿನಿಮಾ ಬಗ್ಗೆ ಪೋಸ್ಟ್ ಶೇರ್ ಮಾಡಿದ್ದಾರೆ. ರಿಷಬ್ ಶೆಟ್ಟಿ ಅವರ ಪೋಸ್ಟರ್ ಶೇರ್ ಮಾಡಿ, ‘ಕಾಂತಾರ ಬಗ್ಗೆ ಅಸಾಧಾರಣವಾದ ವಿಷಯಗಳನ್ನು ಕೇಳಲು ತುಂಬಾ ಕುತೂಹಲವಾಗುತ್ತಿದೆ. ಕಾಂತಾರ ನೋಡಲು ಕುತೂಹಲದಿಂದ ಕಾಯುತ್ತಿದ್ದೀನಿ’ ಎಂದು ಹೇಳಿದರು.