ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (94) ಕೆಲ ವಯೋ ಸಹಜ ಕಾಯಿಲೆ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಇತ್ತ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಮನೂರು ಶಿವಶಂಕರಪ್ಪರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಆಸ್ಪತ್ರೆಯಲ್ಲಿದ್ದ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಮಾವನ ಆರೋಗ್ಯದ ಬಗ್ಗೆ ಸಿಎಂಗೆ ಮಾಹಿತಿ ನೀಡಿದ್ದಾರೆ. ಇನ್ನು ಈ ವೇಳೆ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಎಚ್ ಆಂಜನೇಯ ಸಾಥ್ ನೀಡಿದರು.

