Tuesday, November 25, 2025

ರಾಜ್ಯ ರಾಜಕಾರಣ ಸಿಎಂ ಬದಲಾವಣೆ ಚರ್ಚೆ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಭೇಟಿಯಾದ ಸಿಎಂ ಸಿದ್ದರಾಮಯ್ಯ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕಾರಣ ರಂಗೇರಿದೆ. ಮುಖ್ಯಮಂತ್ರಿ ಬದಲಾವಣೆ, ಸಂಪುಟ ಪುನರ್ ರಚನೆ ಸೇರಿದಂತೆ ಹಲವು ವಿಚಾರಗಳು ಚರ್ಚೆಯಾಗುತ್ತಿದೆ. ಈ ಬೆಳವಣಿಗೆ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಸದಾಶಿವನಗರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನೆಗೆ ಆಗಮಿಸಿದ್ದಾರೆ. ಖರ್ಗೆ ಜೊತೆ ಮಹತ್ವದ ಮಾತುಕತೆ ನಡೆಸುತ್ತಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಮಹತ್ವದ ಚರ್ಚೆಗೆ ಮುಖ್ಯಮಂತ್ರಿಗಳ ಜೊತೆ ಬೆಂಬಲಿಗ ಶಾಸಕರು ಆಗಮಿಸ್ತಾರೆ ಅನ್ನೋ ಮಾಹಿತಿ ಇತ್ತು. ಇತ್ತ ಸಿದ್ದರಾಮಯ್ಯ ನಿವಾಸದಲ್ಲಿ ಸಚಿವ ಜಮೀರ್ ಅಹಮ್ಮದ್, ಈಶ್ವರ ಖಂಡೆ ಸೇರಿದಂತೆ ಕೆಲ ಪ್ರಮುಖ ನಾಯಕರು ಜಮಾಯಿಸಿದ್ದರು. ಆದರೆ ಖರ್ಗೆ ಭೇಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಆಗಮಿಸಿದ್ದಾರೆ. ಇವರ ಜೊತೆ ಯಾವುದೇ ಶಾಸಕರು ಆಗಮಿಸಿಲ್ಲ.

ಅರಮನೆ ಮೈದಾನದಲ್ಲಿ ನಡೆದ ಸಚಿವ ಡಿ ಸುಧಾಕರ್ ಪುತ್ರನ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿದ್ದರಾಮಯ್ಯ, ಬಳಿಕ ನೇರವಾಗಿ ಸದಾಶಿವನಗರದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಆಗಮಿಸಿದ್ದಾರೆ.

error: Content is protected !!