Tuesday, November 25, 2025

ಪೊಡವಿಗೊಡೆಯ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಮೋದಿ ಭೇಟಿ: ಇಲ್ಲಿದೆ ನೋಡಿ ಪ್ರಧಾನಿ ಆಗಮನದ ವೇಳಾಪಟ್ಟಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನ.28ರಂದು ಶ್ರೀಕೃಷ್ಣ ಮಠದಲ್ಲಿ ನಡೆಯುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುವುದು ಖಚಿತವಾಗಿದ್ದು, ಪ್ರಧಾನ ಮಂತ್ರಿಯವರ ಕಾರ್ಯಾಲಯ ಅಧಿಕೃತ ವೇಳಾ ಪಟ್ಟಿ ಪ್ರಕಟಿಸಿದೆ.

ಪ್ರಧಾನ ಮಂತ್ರಿ ಕಾರ್ಯಾಲಯದಿಂದ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದ್ದು, ಹೆಲಿಪ್ಯಾಡ್ ಸೇರಿ ಕಾರ್ಯಕ್ರಮಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಳಿಸಲು ಸೂಚಿಸಲಾಗಿದೆ.

ಕಾರ್ಯಕ್ರಮ ಆಯೋಜಕರಿಗೆ ಭದ್ರತಾ ವಿಚಾರಕ್ಕೆ ಸಂಬಂಧಿಸಿ ಎಸ್‌ಪಿಜಿ ಅಧಿಕಾರಿಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ಪ್ರಧಾನಿ ಮೋದಿ ಅಧಿಕೃತ ವೇಳಾ ಪಟ್ಟಿ
ಬೆಳಗ್ಗೆ 8.15ಕ್ಕೆ ದೆಹಲಿ ವಿಮಾನ ನಿಲ್ದಾಣದಿಂದ ವಾಯುಪಡೆಯ ವಿಮಾನದಲ್ಲಿ ಹೊರಟು 11.05 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ. 11.10ಕ್ಕೆ ಹೆಲಿಕ್ಯಾಪ್ಟರ್ ಮೂಲಕ 11.35ಕ್ಕೆ ಆದಿ ಉಡುಪಿ ಹೆಲಿಪ್ಯಾಡ್‌ನಲ್ಲಿ ಇಳಿಯಲಿದ್ದಾರೆ.

12 ಗಂಟೆಗೆ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ದೇವರ ದರುಶನ ಬಳಿಕ ಲಕ್ಷ ಕಂಠ ಗೀತಾ ಪಾರಾಯಣ ಸಮಾರಂಭದಲ್ಲಿ ಭಾಗಿಯಾಗಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

1.30ಕ್ಕೆ ಮಠದಿಂದ ಹೊರಟು 1.45ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ. ಅಲ್ಲಿಂದ 2.15 ಕ್ಕೆ ಗೋವಾದ ದಾಬೋಲಿಮ್ ವಿಮಾನ ನಿಲ್ದಾಣಕ್ಕೆ ವಿಮಾನದಲ್ಲಿ ತೆರಳಿ ಗೋಕರ್ಣ ಪರ್ತಗಾಳಿ ಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

error: Content is protected !!