ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಕಾರು ಸ್ಫೋಟ ಪ್ರಕರಣದ ತನಿಖೆಯಲ್ಲಿ ಸ್ಫೋಟಕ ಮಾಹಿತಿಗಳು ಹೊರಬರುತ್ತಿದೆ. ಇದೀಗ ಮತ್ತೊಬ್ಬ ಶಂಕಿತ ಉಗ್ರನ ಬಂಧಿಸಲಾಗಿದೆ.ಬಂಧಿತ ವ್ಯಕ್ತಿಯನ್ನ ಜಮ್ಮು-ಕಾಶ್ಮೀರದ ಬಟಮಾಲೂ ಪ್ರದೇಶದ ನಿವಾಸಿ ತುಫೈಲ್ ನಿಯಾಜ್ ಭಟ್ ಎಂದು ಗುರುತಿಸಲಾಗಿದೆ.
ಶ್ರೀನಗರ ಸಿಐಡಿ ಪೊಲೀಸರ ವರದಿ ಪ್ರಕಾರ, ತುಫಾಲಿ ನಿಯಾಝ್ ದೆಹಲಿ ಬಾಂಬ್ ಸ್ಫೋಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾನೆ. ಈತನ ಎಲೆಕ್ಟ್ರಿಕ್ ಸಪೋರ್ಟ್ ಸ್ಫೋಟದಲ್ಲಿ ನೆರವಾಗಿದೆ. ಇದೀಗ ಈತನ ನೆರವು ವೈದ್ಯ ಉಗ್ರರು ಮಾತ್ರವಲ್ಲ, ಹಲವು ಉಗ್ರರು ಪಡೆದುಕೊಂಡಿರುವ ಸಾಧ್ಯತೆ ಇದೆ. ಈ ಕುರಿತು ತನಿಖೆ ನಡಯುತ್ತಿದೆ.
ಈ ಕುರಿತು ತನಿಖೆ ಆರಂಭಿಸಿದ್ದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನ ಪರಿಶೀಲಿಸಿದಾಗ ವೈದ್ಯ ಆದಿಲ್ ಅಹ್ಮದ್ ರಾಥರ್ ಪೋಸ್ಟರ್ ಅಂಟಿಸುತ್ತಿರುವುದು ಬೆಳಕಿಗೆ ಬಂದಿತ್ತು. ಅದರಂತೆ ಶ್ರೀನಗರ ಪೊಲೀಸರು ಯುಎಪಿಎ ಕಾಯ್ದೆಯ (ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯಿದೆ) ಸೆಕ್ಷನ್ 13,16, 17, 18, 18-ಬಿ, 19, 20, 23, 39 &40, ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 61 (2), 147, 148, 152, 351(2) ಹಾಗೂ ಸ್ಫೋಟಕ ವಸ್ತು ಕಾಯ್ದೆ ಸೆಕ್ಷನ್ 4/5 ಮತ್ತು ಶಸ್ತ್ರಾಸ್ತ್ರ ನಿಷೇಧ ಕಾಯ್ದೆ ಸೆಕ್ಷನ್ 7/25/27 ಅಡಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಳ್ಳಲಾಗಿತ್ತು. ಇದರ ಬೆನಲ್ಲೇ ಇಬ್ಬರು ವೈದ್ಯರು ಸೇರಿದಂತೆ 7 ಉಗ್ರರನ್ನು ಬಂಧಿಸಿದ್ದು, ʻವೈಟ್ ಕಾಲರ್ ಭಯೋತ್ಪಾದಕ ಜಾಲʼವನ್ನ ಬಯಲಿಗೆಳೆಯಲಾಗಿತ್ತು. ಅನೇಕ ವೃತ್ತಿಪರರು ಹಾಗೂ ವಿದ್ಯಾರ್ಥಿಗಳೂ ಇದರಲ್ಲಿ ಸಕ್ರಿಯವಾಗಿದ್ದಾರೆ ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದರು.

