Tuesday, November 25, 2025

ಬಾವಿಯಲ್ಲಿ ವಿದ್ಯಾರ್ಥಿಯ ಮೃತ ದೇಹ ಪತ್ತೆ: ಸಾವಿನ ಸುತ್ತ ಹೆಚ್ಚಿದೆ ಅನುಮಾನದ ಹುತ್ತ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ದೊಡ್ಡಸೋಮನಹಳ್ಳಿ ಗ್ರಾಮದಲ್ಲಿ 22 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಕರಣ್.ಎಸ್ ಅವರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದ್ದು, ಈ ಘಟನೆ ಆತಂಕ ಮತ್ತು ಸಂಶಯಗಳಿಗೆ ಕಾರಣವಾಗಿದೆ. ಚಿಕ್ಕಮಗಳೂರು ಮೂಲದ ಕರಣ್ ಅವರು ಶ್ರವಣಬೆಳಗೊಳದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಘಟನಾ ಸ್ಥಳದಲ್ಲಿ ವಿದ್ಯಾರ್ಥಿಯ ಬೈಕ್ ಹಾಗೂ ಮೊಬೈಲ್ ಫೋನ್ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆಯೋ ಅಥವಾ ಇನ್ನಾವುದೋ ದುರ್ಘಟನೆ ಎಂಬ ಪ್ರಶ್ನೆಯನ್ನು ಹುಟ್ಟಿಸಿದೆ. ಮಾಹಿತಿ ಲಭ್ಯವಾಗುತ್ತಿದ್ದಂತೆ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮೇಲಕ್ಕೆತ್ತಿ, ನಂತರ ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದೆ.

ಈ ಸಂಬಂಧ ಕೆಆರ್ ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕರಣ್ ಸಾವಿನ ಹಿನ್ನೆಲೆ, ಘಟನೆ ನಡೆದ ಸಮಯ ಮತ್ತು ಸುತ್ತಮುತ್ತಲಿನ ಸಾಕ್ಷ್ಯಗಳನ್ನು ಪರಿಶೀಲಿಸುತ್ತಿರುವ ಪೊಲೀಸರು ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.

error: Content is protected !!