ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ಟೋಬರ್ 10 ರಂದು ಅಮೆರಿಕದ ಮಧ್ಯಸ್ಥಿಕೆಯಲ್ಲಿ ಘೋಷಿಸಲಾದ ಕದನ ವಿರಾಮದ ನಂತರವೂ ಗಾಜಾದಲ್ಲಿ ಉದ್ವಿಗ್ನತೆ ತಗ್ಗಿಲ್ಲ. ಇಸ್ರೇಲ್ ಮತ್ತೊಮ್ಮೆ ಗಾಜಾದ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದ್ದು, ಕನಿಷ್ಠ 24 ಪ್ಯಾಲೆಸ್ಟೀನಿಯರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.
ದಕ್ಷಿಣ ಗಾಜಾದಲ್ಲಿ ಇಸ್ರೇಲಿ ಪಡೆಗಳ ಮೇಲೆ ಹಮಾಸ್ ನಡೆಸಿದ ಗುಂಡಿನ ದಾಳಿಗೆ ಪ್ರತಿಯಾಗಿ ಈ ವಾಯುದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಸೇನೆ ಹೇಳಿಕೊಂಡಿದೆ. ಆದರೆ ಹಮಾಸ್ ನಿಯಂತ್ರಣದ ಆರೋಗ್ಯ ಸಚಿವಾಲಯವು ಇಸ್ರೇಲ್ ಕದನ ವಿರಾಮ ಒಪ್ಪಂದವನ್ನು ನಿರಂತರವಾಗಿ ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದ್ದು, ಕದನ ವಿರಾಮ ಜಾರಿಗೆ ಬಂದ ನಂತರ ನಡೆದ ದಾಳಿಗಳಲ್ಲಿ ಈಗಾಗಲೇ 312 ಪ್ಯಾಲೆಸ್ಟೀನಿಯರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಅಂತಾರಾಷ್ಟ್ರೀಯ ಸಮುದಾಯ ಇಸ್ರೇಲ್ ಮೇಲೆ ಒತ್ತಡ ಹೇರುವಂತೆ ಸಹ ಅವರು ಆಗ್ರಹಿಸಿದ್ದಾರೆ.

