Thursday, October 30, 2025

ಸಾರ್ವಜನಿಕರಿಗೆ ತೊಂದರೆಯಾಗ್ತಿದೆ, ಹಠ ಮಾಡಬೇಡಿ, ಕರ್ತವ್ಯಕ್ಕೆ ಹಾಜರಾಗಿ ಎಂದ ಡಿಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸಾರಿಗೆ ಇಲಾಖೆ ನೌಕರರ ಬೇಡಿಕೆಗಳು ನ್ಯಾಯಬದ್ಧವಾಗಿದೆ. ಆದರೆ ನೌಕರರು ಸರ್ಕಾರದ ಸ್ಥಿತಿಯನ್ನು ಸಹ ಗಮನದಲ್ಲಿಟ್ಟುಕೊಳ್ಳಬೇಕು. ಮುಖ್ಯಮಂತ್ರಿಗಳು ಮತ್ತು ಸಾರಿಗೆ ಇಲಾಖೆ ಸಚಿವರು ನೌಕರರಿಗೆ ಸಹಾಯ ಮಾಡುವ ಮನಸ್ಥಿತಿಯಲ್ಲಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ.

ಪರಿಸ್ಥಿತಿಯನ್ನು, ರಾಜ್ಯದ ಸಾಮಾನ್ಯ ನಾಗರಿಕರಿಗೆ ಆಗುತ್ತಿರುವ ತೊಂದರೆಗಳನ್ನು ನೌಕರರು ಅರ್ಥಮಾಡಿಕೊಳ್ಳಬೇಕು 

ನಾಗರಿಕರ ಯೋಗಕ್ಷೇಮ ಮುಖ್ಯವಾಗುತ್ತದೆ. ಹೀಗಾಗಿ ದಯವಿಟ್ಟು ಸರ್ಕಾರ ಜೊತೆ ಸಹಕರಿಸಿ ಎಂದು ಸಾರಿಗೆ ಇಲಾಖೆ ನೌಕರರಿಗೆ ನಾನು ಮನವಿ ಮಾಡುತ್ತೇನೆ. ಮುಷ್ಕರ ಮಧ್ಯೆ ಕರ್ತವ್ಯಕ್ಕೆ ಹಾಜರಾಗಿರುವ ಕೆಲವು ಬಸ್ ಕಂಡಕ್ಟರ್, ಡ್ರೈವರ್ ಗಳಿಗೆ ನಾನು ಅಭಿನಂದನೆ ಹೇಳುತ್ತೇನೆ. ಸಾರ್ವಜನಿಕರ ಬದುಕು ಬಹಳ ಮುಖ್ಯವಾಗುತ್ತದೆ, ನೀವು ಹಠ ಮಾಡಬೇಡಿ, ಸರ್ಕಾರ ಸಾಧ್ಯವಿರುವ ಸಹಾಯ ಮಾಡುತ್ತದೆ, ದಯವಿಟ್ಟು ಅರ್ಥ ಮಾಡಿಕೊಳ್ಳಿ ಎಂದು ಮನವಿ ಮಾಡಿಕೊಂಡರು.

error: Content is protected !!