Tuesday, November 25, 2025

ಇತಿಹಾಸ ನಿರ್ಮಿಸಿದ ಭಾರತ: ಚೊಚ್ಚಲ ಅಂಧರ ಟಿ20 ವಿಶ್ವಕಪ್ ಗೆದ್ದ ಮಹಿಳಾ ಟೀಮ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮಹಿಳಾ ಕ್ರಿಕೆಟ್ ತಂಡ ಮತ್ತೊಂದು ಇತಿಹಾಸ ನಿರ್ಮಿಸಿದ್ದು, ಮೊದಲ ಬಾರಿಗೆ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಗೆದ್ದು ದಾಖಲೆ ನಿರ್ಮಿಸಿದೆ.

ಭಾರತ ಮಹಿಳಾ ಕ್ರಿಕೆಟ್ ತಂಡ ಏಕದಿನ ವಿಶ್ವಕಪ್ ಜಯಿಸಿತ್ತು. ಈ ಖುಷಿ ಬೆನ್ನಲ್ಲೇ ಭಾರತ ಮಹಿಳಾ ಅಂಧರ ಕ್ರಿಕೆಟ್ ತಂಡ ಕೂಡ ತನ್ನ ಚೊಚ್ಚಲ ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ.

ಕೊಲಂಬೊದಲ್ಲಿ ಭಾನುವಾರ ನಡೆದ ಮೊದಲ ಅಂಧ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ನೇಪಾಳವನ್ನು ಏಳು ವಿಕೆಟ್‌ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದಿದೆ.

ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನೇಪಾಳ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ನೇಪಾಳ ತಂಡವನ್ನು ಮಣಿಸುವ ಮೂಲಕ ಭಾರತ ಅಂಧ ಮಹಿಳಾ ಕ್ರಿಕೆಟ್ ತಂಡ ಟ್ರೋಫಿಗೆ ಮುತ್ತಿಟ್ಟಿದೆ.

ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ನೇಪಾಳ ತಂಡವು 20 ಓವರ್​ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 114 ರನ್‌ಗಳಿಸಿತು.
ಈ ಗುರಿಯನ್ನು ಬೆನ್ನತ್ತಿದ ಭಾರತ ಮಹಿಳಾ ತಂಡವು 12 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 117 ರನ್‌ಗಳಿಸಿ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಭಾರತ ಮಹಿಳಾ ತಂಡವು ಚೊಚ್ಚಲ ಬಾರಿಗೆ ಅಂಧರ ಟಿ20 ವಿಶ್ವಕಪ್​ ಅನ್ನು ಮುಡಿಗೇರಿಸಿಕೊಂಡಿದೆ.

error: Content is protected !!