April 22, 2026
Wednesday, April 22, 2026
spot_img

ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಿತ್ತಾಟ: ಅಮಿತ್ ಶಾ ಭೇಟಿಯಾದ ಬಿ.ವೈ.ವಿಜಯೇಂದ್ರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಭೇಟಿಯಾಗಿ ಬಿಹಾರ ಚುನಾವಣೆಯಲ್ಲಿ NDA ಮಿತ್ರಕೂಟ ಐತಿಹಾಸಿಕ ದಿಗ್ವಿಜಯಕ್ಕೆ ಅಭಿನಂದಿಸಿದರು.

ಇದೇ ವೇಳೆ ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಜೋರಾಗಿ ನಡೆಯುತ್ತಿದ್ದು, ಈ ಕುರಿತುಮಾಹಿತಿ ನೀಡಿದ್ದಾರೆ.

ರಾಷ್ಟ್ರ ರಾಜಕಾರಣಕ್ಕೆ ಸ್ಪಷ್ಟ ದಿಕ್ಸೂಚಿ ಎಂದು ವಿಶ್ಲೇಷಿಸಲಾಗಿದ್ದ ಬಿಹಾರ ಚುನಾವಣೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿ, NDA ಮಿತ್ರಕೂಟ ಐತಿಹಾಸಿಕ ದಿಗ್ವಿಜಯ ಸಾಧಿಸುವಲ್ಲಿ ಮಹತ್ವದ ಪಾತ್ರವಹಿಸಿ ಚುನಾವಣಾ ನೈಪುಣ್ಯತೆ ಮೆರೆದ ಮಾನ್ಯ ಅಮಿತ್ ಶಾ ಜಿ ಅವರು ಬಿಜೆಪಿಗೆ ಕಾರ್ಯಕರ್ತರಿಗೆ ಪ್ರೇರಣಾಶೀಲ ನಾಯಕರಾಗಿದ್ದಾರೆ. ಇಂದಿನ ಅವರ ಭೇಟಿಯ ಸಂದರ್ಭದಲ್ಲಿ ಕರ್ನಾಟಕದ ರಾಜಕಾರಣದ ಪ್ರಸ್ತುತ ವಿದ್ಯಮಾನಗಳ ಮಾಹಿತಿ ನೀಡಲಾಯಿತು. ಪಕ್ಷ ಸಂಘಟನೆ ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಮಾರ್ಗದರ್ಶನ ಪಡೆಯಲಾಯಿತು ಎಂದು ಬರೆದುಕೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !