ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿ ಸೋಮವಾರ ಭಾರೀ ಮಳೆಯಿಂದಾಗಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶನಿವಾರದಿಂದ ಕೇಂದ್ರಾಡಳಿತ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ಹಲವಾರು ವಸತಿ ಪ್ರದೇಶಗಳು ಮತ್ತು ಮುಖ್ಯ ರಸ್ತೆಗಳು ಜಲಾವೃತಗೊಂಡಿವೆ.
ಪುದುಚೇರಿ ಗೃಹ ಮತ್ತು ಶಿಕ್ಷಣ ಸಚಿವ ಎ ನಮಶ್ಶಿವಾಯಂ ಅವರು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ, ಭಾರೀ ಮಳೆಯ ಹಿನ್ನೆಲೆಯಲ್ಲಿ ಎರಡೂ ಪ್ರದೇಶಗಳಲ್ಲಿನ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳು ಮತ್ತು ಎಲ್ಲಾ ಕಾಲೇಜುಗಳು ಸೋಮವಾರ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

