ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಾದ್ಯಂತ ರಸ್ತೆ ಅಪಘಾತಗಳ ಪ್ರಮಾಣ ಹೆಚ್ಚುತ್ತಿರುವ ನಡುವೆಯೇ, ತಮಿಳುನಾಡಿನಲ್ಲಿ ಮತ್ತೊಂದು ಭೀಕರ ದುರಂತ ಸಂಭವಿಸಿದೆ. ತೆಂಕಾಸಿ ಜಿಲ್ಲೆಯ ಇಡಕಲ್ ಬಳಿ ಎರಡು ಖಾಸಗಿ ಬಸ್‌ಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹಲವಾರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ.
ಇಡಕಲ್ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.

