Monday, November 24, 2025

ಸಿಎಂ ಹೇಳಿದ ಮೇಲೆ ಅದೇ ವೇದ ವಾಕ್ಯ: ಡಿಸಿಎಂ ಡಿ.ಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂಬ ಸಿಎಂ ಸಿದ್ಧರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಸಿಎಂ ಹೇಳಿದ ಮೇಲೆ ಅದೇ ವೇದ ವಾಕ್ಯ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಿಎಂ ಸಿದ್ಧರಾಮಯ್ಯ ಹೈಕಮಾಂಡ್ ವಿಚಾರವನ್ನು ಹೇಳಿದ್ದಾರೆ. ಸಿಎಂ ಹೇಳಿದ ಮೇಲೆ ಅದೇ ವೇದ ವಾಕ್ಯ. ನಾನು ಹೇಳುವ ಅಗತ್ಯವಿಲ್ಲ ಎಂದರು.

ಅಂದಹಾಗೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಹೇಳಿಕೆಗೆ ಬದ್ಧ ಎಂಬುದಾಗಿ ತಿಳಿಸಿದ್ದರು.

error: Content is protected !!