Monday, November 24, 2025

ಕೇರಳದಲ್ಲಿ ಭಾರೀ ಮಳೆ, ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಸೋಮವಾರ ರಾಜ್ಯದಲ್ಲಿ ವ್ಯಾಪಕ ಮಳೆಯಾಗಿದೆ. ವರುಣಾರ್ಭಟ ಜೋರಾಗುತ್ತಿದ್ದಂತೆ ಭಾರತೀಯ ಹವಾಮಾನ ಇಲಾಖೆ ಕೇರಳದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದ್ದು, 6ರಿಂದ 11 ಸೆಂ.ಮೀ ಮಳೆಯಾಗಲಿದೆ ಎಂದು ತಿಳಿಸಿದೆ.

ಐಎಂಡಿ ಮಾಹಿತಿ ಪ್ರಕಾರ, ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕೆಲವೆಡೆ 7 ರಿಂದ 11 ಸೆಂ.ಮೀ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಗುಡುಗು, ಮಿಂಚು ಸಹಿತ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.

error: Content is protected !!