ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾನು ಹಾಗೂ ಡಿ.ಕೆ.ಶಿವಕುಮಾರ್ ಬದ್ಧರಾಗಬೇಕು. ಹೈ ಕಮಾಂಡ್ ಅನ್ನು ಐದು ತಿಂಗಳ ಹಿಂದೆ ಭೇಟಿಯಾದಾಗ, ಸಚಿವ ಸಂಪುಟ ಪುನರ್ ರಚನೆ ಮಾಡಲು ಸೂಚನೆ ನೀಡಿದ್ದರು. ನಾನು ಎರಡೂವರೆ ವರ್ಷ ತುಂಬಿದ ನಂತರ ಮಾಡೋಣ ಎಂದು ತಿಳಿಸಿದ್ದೆ. ಈಗ ಏನು ಸೂಚನೆ ನೀಡುತ್ತಾರೋ ಅದರಂತೆ ನಡೆಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಶಿಡ್ಲಘಟ್ಟದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ ಒಂದು ಲಕ್ಷ ಕೋಟಿ ರೂಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಲಾಗಿದೆ. ನಾವು ನುಡಿದಂತೆ ನಡೆದ ಸರ್ಕಾರ ಎಂದು ಹೇಳಿದ್ದೆವು. ಅದರಂತೆ ನಡೆದಿದ್ದೇವೆ ಎಂದು ಹೇಳಿದರು.
ಬಿಜೆಪಿಯವರು ಸರ್ಕಾರದ ಬಳಿ ಹಣವಿಲ್ಲ ಎನ್ನುತ್ತಾರೆ. 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

