Monday, November 24, 2025

2025ರ ಕಬ್ಬಡ್ಡಿ ವಿಶ್ವಕಪ್​​: ಸತತ 2ನೇ ಬಾರಿ ಗೆದ್ದು ಸಂಭ್ರಮಿಸಿದ ಭಾರತೀಯ ನಾರಿಯರು!

ಹೊಸದಿಗಂತ ವರದಿ, ಮಂಗಳೂರು:

ಬಾಂಗ್ಲಾದೇಶದ ಢಾಕಾದಲ್ಲಿ ನಡೆದ 2025ರ ಮಹಿಳಾ ಕಬಡ್ಡಿ ವಿಶ್ವಕಪ್​​ ಟೂರ್ನಿಯಲ್ಲಿ ಭಾರತ ತಂಡ ಚಾಂಪಿಯನ್​ ಆಗಿ ಹೊರಹೊಮ್ಮಿದೆ. ಆ ಮೂಲಕ ಸತತ ಎರಡನೇ ಬಾರಿಗೆ ವಿಶ್ವಕಪ್​​ ಅನ್ನು ಮುಡಿಗೇರಿಸಿಕೊಂಡಿದ್ದಾರೆ.

ರೋಚಕ ಫೈನಲ್ ಪಂದ್ಯದಲ್ಲಿ ಚೈನೀಸ್ ತೈಪೆ ತಂಡವನ್ನು 35-28 ಅಂಕಗಳ ಅಂತರದಲ್ಲಿ ಸೋಲಿಸುವ ಮೂಲಕ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದೆ.

ಸೆಮಿಫೈನಲ್‌ನಲ್ಲಿ ಇರಾನ್ ತಂಡವನ್ನು 33–21 ಅಂತರದಿಂದ ಸೋಲಿಸುವ ಮೂಲಕ ಭಾರತ ತಂಡ ಫೈನಲ್ ಪ್ರವೇಶಿಸಿತ್ತು. ಇತ್ತ ಚೈನೀಸ್ ತೈಪೆ ತಂಡ ಕೂಡ ತನ್ನದೇ ಆದ ಅಜೇಯ ದಾಖಲೆಯೊಂದಿಗೆ ಫೈನಲ್‌ಗೆ ತಲುಪಿತ್ತು. ಇಂದು ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಚೈನೀಸ್ ತೈಪೆ ತಂಡವನ್ನು ಮಣಿಸುವ ಮೂಲಕ ವಿಶ್ವಕಪ್​​ ಟ್ರೋಫಿಯನ್ನು ಭಾರತ ತಂಡ ಎತ್ತಿಹಿಡಿದಿದೆ.

error: Content is protected !!