ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಂಕಸಿ ಜಿಲ್ಲೆಯ ಇಡೈಕಲ್ ಬಳಿ ಸೋಮವಾರ ಬೆಳಿಗ್ಗೆ ಎರಡು ಖಾಸಗಿ ಬಸ್‌ಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದ್ದು, ಹೆಚ್ಚಿನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಯೇ ಈ ದುರಂತಕ್ಕೆ ಕಾರಣವೆಂದು ಪೊಲೀಸರು ಪ್ರಾಥಮಿಕ ಮಾಹಿತಿಯಲ್ಲಿ ತಿಳಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮೃತರ ಕುಟುಂಬಗಳಿಗೆ ಧನಸಹಾಯ ಘೋಷಿಸಿ, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗಂಭೀರ ಗಾಯಾಳುಗಳಿಗೆ 1 ಲಕ್ಷ, ಸಣ್ಣ ಗಾಯಗಳಿಗೆ 50 ಸಾವಿರ ಮತ್ತು ಮೃತರ ಕುಟುಂಬಿಕರಿಗೆ 3 ಲಕ್ಷ ಪರಿಹಾರ ನೀಡಲಾಗುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.
ಜಿಲ್ಲಾಧಿಕಾರಿಗಳು ಸರ್ಕಾರಿ ಆಸ್ಪತ್ರೆಗೆ ತೆರಳಿ ಗಾಯಾಳುಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಬೇಕೆಂದು ನಾನು ಆದೇಶಿಸಿದ್ದೇನೆ ಎಂದು ಸ್ಟಾಲಿನ್ ಹೇಳಿದ್ದಾರೆ.

