ಹೊಸದಿಗಂತ ವರದಿ ಅಂಕೋಲಾ:
ತಾಲೂಕಿನ ಕೇಣಿಯಲ್ಲಿ ವಾಣಿಜ್ಯ ಬಂದರು ಯೋಜನೆ ವಿರುದ್ಧದ ಸ್ಥಳೀಯರ ಹೋರಾಟ ಒಂದು ವರ್ಷಕ್ಕೆ ತಲುಪಿರುವ ಸಂದರ್ಭದಲ್ಲಿ ಕರಾಳ ದಿನಾಚರಣೆ ಅಂಕೋಲಾ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಅಂಕೋಲಾ ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಿ ಬೆಂಬಲ ವ್ಯಕ್ತಪಡಿಸಲಾಯಿತು.
ತುರ್ತು ಸೇವೆಗಳನ್ನು ಹೊರತುಪಡಿಸಿ ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟುಗಳು, ಮೀನು ಮಾರುಕಟ್ಟೆ, ತರಕಾರಿ ಮಾರುಕಟ್ಟೆ, ಬೀದಿ ಬದಿಯ ವ್ಯಾಪಾರ ಸ್ಥಗಿತಗೊಂಡಿತ್ತು. ಆಟೋ ರಿಕ್ಷಾ, ಟೆಂಪೊ ಟ್ಯಾಕ್ಸಿ ಯೂನಿಯನ್‌ನ ಗಳು ಬೆಂಬಲ ನೀಡುವ ಮೂಲಕ ಸಂಚಾರ ಸ್ಥಗಿತಗೊಳಿಸಿದರು. ಪಟ್ಟಣದ ಜೈಹಿಂದ್ ವೃತ್ತದಲ್ಲಿ ಸಹಸ್ರಾರು ಜನರು ಸೇರಿ ಪ್ರತಿಭಟನೆ ನಡೆಸಿದರು.
ವಾಣಿಜ್ಯ ಬಂದರು ಯೋಜನೆ ವಿರುದ್ಧದ ಸ್ಥಳೀಯರ ಹೋರಾಟಕ್ಕೆ ಒಂದು ವರ್ಷ: ಅಂಕೋಲಾ ಬಂದ್!

