Wednesday, November 26, 2025

SHOCKING | ಕಾರು ಅಪಘಾತದಲ್ಲಿ IAS ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಾರು ಅಪಘಾತದಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿದ್ದ ,ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.

ಇಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಈ ದುರ್ಘಟನೆ ಸಂಭವಿಸಿದೆ. ಶ್ವಾನ ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಂತ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರನ್ನು ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಇನ್ನೋವಾ ಕಾರಿನಲ್ಲಿ ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಸೇರಿದಂತೆ ಐದು ಜನ ಇದ್ದು, ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಹಳ್ಳಿ ಕ್ರಾಸ್ ಬಳಿ ಕಾರಿಗೆ ಶ್ವಾನ ಅಡ್ಡಬಂದಿದ್ದು, ಅದನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕಕ್ಕೆ ಹೋಗಿ ಪಲ್ಟಿಯಾಗಿದೆ.

ಮಹಾಂತೇಶ್ ಬೀಳಗಿ ಅವರು ಹಿರಿಯ ಐಎಎಸ್ ಅಧಿಕಾರಿಯಾಗಿದ್ದರು. ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು.

error: Content is protected !!