January16, 2026
Friday, January 16, 2026
spot_img

2026ರ ಟಿ20 ವಿಶ್ವಕಪ್‌ ಟೂರ್ನಿಗೆ ಹಿಟ್ ಮ್ಯಾನ್ ರೋಹಿತ್‌ ಶರ್ಮಾ ರಾಯಭಾರಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ICC) ಮಂಗಳವಾರ ಪ್ರಕಟಿಸಿದೆ. ಭಾರತ ಹಾಗೂ ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ಟಿ20 ವಿಶ್ವಕಪ್‌ ಟೂರ್ನಿಯು ಫೆಬ್ರವರಿ 7 ರಿಂದ ಮಾರ್ಚ್‌ 8 ರಂದು ನಡೆಯಲಿದೆ.

ಇದರ ಬೆನ್ನಲ್ಲೇ ಭಾರತ ತಂಡದ ಹಿರಿಯ ಬ್ಯಾಟ್ಸ್‌ಮನ್‌ ರೋಹಿತ್‌ ಶರ್ಮಾ ವರನ್ನು ಟಿ20 ವಿಶ್ವಕಪ್‌ ಟೂರ್ನಿಗೆ ರಾಯಭಾರಿಯನ್ನಾಗಿ ನೇಮಿಸಲಾಗಿದೆ ಎಂದು ಐಸಿಸಿ ಅಧ್ಯಕ್ಷ ಜಯ ಶಾ ಘೋಷಣೆ ಮಾಡಿದ್ದಾರೆ.

ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ 2024ರ ಐಸಿಸಿ ಟಿ20 ವಿಶ್ವಕಪ್‌ ಅನ್ನು ಮುಡಿಗೇರಿಸಿಕೊಂಡಿತ್ತು. ಇದಾದ ಬಳಿಕ ಅವರು ಟಿ20ಐ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದರು.

Must Read

error: Content is protected !!