Wednesday, November 26, 2025

26/11 ಮುಂಬೈ ದಾಳಿಗೆ 17 ವರ್ಷ: ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರಮುಂಬೈ ಭಯೋತ್ಪಾದಕ ದಾಳಿಗೆ 17 ವರ್ಷಗಳು ಕಳೆದಿದ್ದು, ಅಮಾಯಕ ಜನರು, ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನವನ್ನು ದೇಶದ ಜನತೆ ನೆನೆಯುತ್ತಿದೆ.

ಪಾಕಿಸ್ತಾನದ ಕರಾಚಿಯಿಂದ ಸಮುದ್ರ ಮಾರ್ಗದ ಮೂಲಕ ಬಂದಿದ್ದ 10 ಮಂದಿ ಲಷ್ಕರ್-ಇ-ತೊಯ್ಬಾ ಉಗ್ರರು 2008ರ ನ.26ರಂದು ಮುಂಬೈನ ತಾಜ್ ಹೋಟೆಲ್, ಶಿವಾಜಿ ಟರ್ಮಿನಲ್ ಸೇರಿದಂತೆ 12 ಸ್ಥಳಗಳ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ವಿದೇಶಿಗರೂ ಸೇರಿದಂತೆ 174 ಮಂದಿ ನಾಗರೀಕರು ಸಾವನ್ನಪ್ಪಿದ್ದರು.

ಸಮುದ್ರ ಮಾರ್ಗದಿಂದ ಬಂದ ಈ ದುಷ್ಕರ್ಮಿಗಳು ತಾಜ್‌ ಮಹಲ್‌ ಹೊಟೇಲ್, ಒಬೇರಾಯ್‌ ಹೊಟೇಲ್‌, ಲಿಯೋಪೋಲ್ಡ್‌ ಕೆಫೆ, ನಾರಿಮನ್‌ ಹೌಸ್‌, ಛತ್ರಪತಿ ಶಿವಾಜಿ ರೈಲ್ವೆ ಟರ್ಮಿನಸ್‌ ಮೊದಲಾದ ಕಡೆ ಮನಬಂದಂತೆ ಬಂದೂಕು ಮತ್ತು ಬಾಂಬಿನ ಮೂಲಕ ದಾಳಿ ನಡೆಸಿದರು. ಒಟ್ಟು ನಾಲ್ಕು ದಿನಗಳ ಕಾಲ ದಾಳಿ ನಡೆಸಿದ್ದರು.

ಈ ದುರ್ಘಟನೆಯಲ್ಲಿ ಆರು ಜನ ಅಮೆರಿಕಾದ ನಾಗರಿಕರು, ಹಲವು ವಿದೇಶೀಯರೂ ಸೇರಿದಂತೆ 166 ಜನರು ಸಾವಿಗೀಡಾಗಿದ್ದರು. 300ಕ್ಕೂ ಅಧಿಕ ಜನರು ಗಾಯಾಳುಗಳಾಗಿದ್ದರು. ಭಾರತದ ಇತಿಹಾಸದಲ್ಲಿ ಕರಾಳ ಅಧ್ಯಾಯ ಆಗಿತ್ತು. ಇಂದಿಗೆ ಆ ಘಟನೆ ನಡೆದು 14 ವರ್ಷಗಳು ಕಳೆದಿವೆ. ಗಾಯ ಮಾಸಿದರೂ, ಗಾಯದ ಗುರುತುಗಳು ಹಾಗೇ ಇವೆ. ಇಂದಿಗೂ ಉಗ್ರರು ತಮ್ಮ ಕ್ರೌರ್ಯ ಮೆರೆಯುತ್ತಿದ್ದಾರೆ.

2008 ನ.21ರಂದು ಪಾಕಿಸ್ತಾನದ 10 ಮಂದಿ ಉಗ್ರರು ಬೋಟ್‌ ಮೂಲಕ ಭಾರತದತ್ತ ಪ್ರಯಾಣಿಸಿದ್ದರು. ಗುರುತು ಮರೆಸಿಕೊಂಡು ಮುಂಬೈಯನ್ನು ಪ್ರವೇಶಿಸಿದ ಉಗ್ರರು ಮೂರು ದಿನಗಳ ಕಾಲ ಹೋಟೆಲ್‌, ರೈಲ್ವೆ ನಿಲ್ದಾಣ, ಆಸ್ಪತ್ರೆ, ಯಹೂದಿ ಸಮುದಾಯ ಕೇಂದ್ರ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಬಾಂಬ್​ ಮತ್ತು ಗುಂಡಿನ ದಾಳಿ ನಡೆಸಿದರು. ಒಟ್ಟು 174 ಜನರ ಸಾವಿಗೆ ಕಾರಣರಾದರು. ದಾಳಿಯಲ್ಲಿ 300ಕ್ಕೂ ಹೆಚ್ಚು ಜನರು ಗಾಯಗೊಂಡರು.

error: Content is protected !!