ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಸ್ಕೆಟ್ ಬಾಲ್ ಅಭ್ಯಾಸದ ವೇಳೆ ಆಟಗಾರನ ಮೇಲೆ ಕಬ್ಬಿಣದ ಕಂಬ ಬಿದ್ದು ಆತ ಮೃತಪಟ್ಟಿರುವ ಘಟನೆ ಹರಿಯಾಣದ ರೋಹ್ಟಕ್ನಲ್ಲಿ ನಡೆದಿದೆ.
ಘಟನೆಯ ನಂತರ, ಆಟಗಾರನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಲಖನ್ ಮಜ್ರಾ ಗ್ರಾಮದ ಕ್ರೀಡಾ ಮೈದಾನದಲ್ಲಿ ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆಟಗಾರ ಬ್ಯಾಸ್ಕೆಟ್‌ಬಾಲ್ ಕೋರ್ಟ್ನಲ್ಲಿ ಒಬ್ಬನೇ ಅಭ್ಯಾಸ ಮಾಡುತ್ತಿದ್ದಾಗ ಅಪಘಾತದ ಸಂಭವಿಸಿದ್ದು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬಾಸ್ಕೆಟ್ ಬಾಲ್ ಪ್ರಾಕ್ಟೀಸ್ ವೇಳೆ ಕಬ್ಬಿಣದ ಕಂಬ ಬಿದ್ದು ಆಟಗಾರ ಸಾವು

