ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರೀ ಮಳೆಯಿಂದಾಗಿ ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಪಂದ್ಯ ರದ್ದುಗೊಂಡಿದೆ.
ಆಸ್ಟ್ರೇಲಿಯಾ ವಿರುದ್ಧದ ಮೊದಲ ಪ್ರಾಕ್ಟೀಸ್ ಪಂದ್ಯದಲ್ಲಿ ಭಾರತ ಜಯಭೇರಿ ಭಾರಿಸಿದ್ದು, ಇದೀಗ ನ್ಯೂಜಿಲೆಂಡ್ ಸೋಲಿಸುವ ಹುಮ್ಮಸ್ಸು ಹೆಚ್ಚಾಗಿತ್ತು. ಆದರೆ ಮಳೆಯ ಕಾರಣದಿಂದ ಪಂದ್ಯ ರದ್ದಾಗಿದೆ. ಮಧ್ಯಾಹ್ನ ನಡೆಯಬೇಕಿದ್ದ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದು, ಸಂಜೆ ಪಂದ್ಯ ನಡೆಯುವ ಸಾಧ್ಯತೆ ಇತ್ತು. ಆದರೆ ಬ್ರಿಸ್ಬೇನ್‌ನಲ್ಲಿ ಇನ್ನೂ ಮಳೆಯಾಗುತ್ತಿದ್ದು, ಪಂದ್ಯ ರದ್ದಾಗಿದೆ.