ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನಲ್ಲಿ ನಕಲಿ ತುಪ್ಪ ತಯಾರಿಕಾ ಘಟಕವನ್ನು ಸ್ಥಾಪಿಸಿ ರಾಜ್ಯಾದ್ಯಂತ ನಕಲಿ ಉತ್ಪನ್ನಗಳನ್ನು ವಿತರಿಸುತ್ತಿದ್ದ ಪ್ರಮುಖ ಸೂತ್ರಧಾರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಶಿವಕುಮಾರ್ ಮತ್ತು ಆತನ ಪತ್ನಿ ರಮ್ಯಾ ಎಂದು ಗುರುತಿಸಲಾಗಿದೆ. ಸಿಸಿಬಿ ಪೊಲೀಸರ ತನಿಖೆ ವೇಳೆ ಈ ದಂಪತಿಯೇ ನಕಲಿ ನಂದಿನಿ ಉತ್ಪನ್ನಗಳ ತಯಾರಿಕೆ ಘಟಕದ ಕಿಂಗ್‌ಪಿನ್‌ಗಳು ಎಂಬುದು ದೃಢಪಟ್ಟಿದೆ.
ಸಿಸಿಬಿ ಡಿಸಿಪಿ ಶ್ರೀಹರಿಬಾಬು ಅವರು ನೀಡಿರುವ ಮಾಹಿತಿ ಪ್ರಕಾರ, ಆರೋಪಿ ದಂಪತಿಗಳು ನೆರೆಯ ತಮಿಳುನಾಡಿನಲ್ಲಿ ನಕಲಿ ತುಪ್ಪ ತಯಾರಿಕೆ ಘಟಕವನ್ನು ಸ್ಥಾಪಿಸಿದ್ದರು. ಈ ಘಟಕದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ, ನಕಲಿ ತುಪ್ಪ ತಯಾರಿಸಲು ಬಳಸುತ್ತಿದ್ದ ದೊಡ್ಡ ದೊಡ್ಡ ಹೈಟೆಕ್ ಮೆಷಿನರಿಗಳು ಮತ್ತು ಅತ್ಯಾಧುನಿಕ ಯಂತ್ರಗಳು ಪತ್ತೆಯಾಗಿವೆ.
ಈ ಯಂತ್ರಗಳನ್ನು ಬಳಸಿಕೊಂಡು ದಂಪತಿಗಳು ನಂದಿನಿ ಲೇಬಲ್‌ನ ನಕಲಿ ತುಪ್ಪಗಳನ್ನು ತಯಾರಿಸಿ, ರೀ-ಪ್ಯಾಕಿಂಗ್ ಮಾಡಿ ಮಾರಾಟ ಮಾಡುತ್ತಿದ್ದರು. ದಾಳಿ ವೇಳೆ ಪೊಲೀಸರು ಮೆಷಿನರಿಗಳನ್ನು ವಶಪಡಿಸಿಕೊಂಡಿದ್ದಾರೆ.

