ಕಾಂಗ್ರೆಸ್ ಅಧ್ಯಕ್ಷ ಗದ್ದುಗೆ ಏರಿದ ಮಲ್ಲಿಕಾರ್ಜುನ ಖರ್ಗೆ: ಅ.26ರಂದು ನಡೆಯಲಿದೆ ಪದಗ್ರಹಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಅಧ್ಯಕ್ಷ ಗದ್ದುಗೆ ಏರಿದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಪದಗ್ರಹಣ ಅಕ್ಟೋಬರ್ 26, 2022ರಂದು ನಡೆಯಲಿದೆ.
ಕಳೆದ ಎರಡು ದಶಕಗಳಲ್ಲಿ ಕಾಂಗ್ರೆಸ್ ಪಕ್ಷವು ನೆಹರೂ-ಗಾಂಧಿ ಕುಟುಂಬದ ಹೊರಗಿನಿಂದ ತನ್ನ ಮೊದಲ ನಾಯಕನನ್ನು ಬುಧವಾರ ಆಯ್ಕೆ ಮಾಡಿದೆ. ಹಿರಿಯ ಶಾಸಕ ಮಲ್ಲಿಕಾರ್ಜುನ ಖರ್ಗೆ (80) ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ನಡೆದ ಚುನಾವಣೆಯಲ್ಲಿ ಸುಮಾರು 9,000 ಪ್ರತಿನಿಧಿಗಳು ಮತ ಚಲಾಯಿಸಿದರು.
ಈ ಬಳಿಕ ಖರ್ಗೆ ಅವರು ಅಕ್ಟೋಬರ್ 26 ರಂದು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಸಂಸದ ರಣದೀಪ್ ಸುರ್ಜೇವಾಲಾ ಘೋಷಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!