ಹೊಸದಿಗಂತ ಡಿಜಿಟಲ್ ಡೆಸ್ಕ್:
ದೀಪಾವಳಿ ಹಬ್ಬದ ಬಲಿಪಾಡ್ಯಮಿ ದಿನದಂದು ಮುಜರಾಯಿ ಇಲಾಖೆ ವ್ಯಾಪ್ತಿಗೊಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಗೋಪೂಜೆ ನಡೆಸುವಂತೆ ಧಾರ್ಮಿಕ ದತ್ತಿ ಇಲಾಖೆ ಸೂಚನೆ ನೀಡಿದೆ.
ಅ.26 ರಂದು ಸಂಜೆ 5:30 ರಿಂದ 6:30 ರವರೆಗಿನ ಗೋಧೋಳಿ ಲಗ್ನದಲ್ಲಿ ಗೋಪೂಜೆ ನಡೆಸುವಂತೆ ಸಚಿವೆ ಶಶಿಕಲಾ ಜೊಲ್ಲೆ ಸೂಚನೆಯಂತೆ ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ.
ಗೋಪೂಜೆ ಸಂಪ್ರದಾಯವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ಎಲ್ಲ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಗೋಪೂಜೆ ನಡೆಸುವಂತೆ ಸೂಚಿಸಲಾಗಿದೆ.
ದೀಪಾವಳಿಯ (ಬಲಿಪಾಡ್ಯಮಿಯ) ದಿನದಂದು ಗೋವುಗಳಿಗೆ ಸ್ನಾನ ಮಾಡಿಸಿ, ಅರಿಶಿಣ, ಕುಂಕುಮ, ಹೂವುಗಳಿಂದ ಅಲಂಕರಿಸಿ, ಅಕ್ಕಿ ಬೆಲ್ಲ, ಸಿಹಿ ತಿನಿಸುಗಳನ್ನು ನೀಡಿ, ಪೂಜಾದಿಗಳನ್ನು ನಡೆಸಿಕೊಂಡು ಬರುತ್ತಿರುವುದನ್ನು ಈಗಲೂ ಕಾಣಬಹುದಾಗಿದೆ. ಕರ್ನಾಟಕದಲ್ಲಿಯೂ ಸಹ ಗೋಪೂಜೆಯನ್ನು ಬಲಿಪಾಡ್ಯಮಿಯಂದು ನಡೆಸಿಕೊಂಡು ಬರಲಾಗುತ್ತಿದೆ.