Friday, November 28, 2025

ಪೋಕ್ಸೋ ಪ್ರಕರಣದಲ್ಲಿ ಬಿಗ್‌ ರಿಲೀಫ್‌ :ಮುರುಘಾ ಶ್ರೀ ನಿರ್ದೋಷಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ ಎಂದು ಕೋರ್ಟ್‌ ತೀರ್ಪು ನೀಡಿದೆ.

2022ರ ಆಗಸ್ಟ್ 26 ರಂದು ಮೈಸೂರಿನ (Mysuru) ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 3 ವರ್ಷಗಳ ಸುದೀರ್ಘ ತನಿಖೆ ಬಳಿಕ ಚಿತ್ರದುರ್ಗದ 2ನೇ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯದ ನ್ಯಾ.ಗಂಗಾಧರಪ್ಪ ಚನ್ನಬಸಪ್ಪ ಹಡಪದ್ ಅವರಿದ್ದ ಪೀಠ ನಿರ್ದೋಷಿ ಅಂತ ತೀರ್ಪು ಪ್ರಕಟಿಸಿದೆ. ಇದರೊಂದಿಗೆ ಮೊದಲ ಪ್ರಕರಣ ಖುಲಾಸೆಯಾಗಿದೆ.

ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ 2022ರ ಆ.26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೊ ಕೇಸ್ (POCSO Case) ದಾಖಲಾಗಿದ್ದು, ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಕೇಸ್ ದಾಖಲಾಗಿತ್ತು.

error: Content is protected !!