ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪತ್ತನಂತಿಟ್ಟ, ಅಲಪ್ಪುಳ, ಇಡುಕ್ಕಿ, ಎರ್ನಾಕುಳಂ, ಮಲಪ್ಪುರಂ, ಕೋಝಿಕ್ಕೋಡ್ ಮತ್ತು ವಯನಾಡ್ ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ 24 ತಾಸುಗಳ ಅವಧಿಯಲ್ಲಿ ಈ ಏಳು ಜಿಲ್ಲೆಗಳಲ್ಲಿ 64.5ರಿಂದ 115.5 ಮಿಲಿಲೀಟರ್ ಮಳೆಯಾಗುವ ಸಾಧ್ಯತೆಯಿದೆ. ಜನತೆ ಇನ್ನಷ್ಟು ಎಚ್ಚರಿಕೆ ವಹಿಸಬೇಕು ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ಉತ್ತರ ಅಂಡಮಾನ್ ಸಮುದ್ರದ ಮೇಲೆ ಚಂಡಮಾರುತ ಸೃಷ್ಟಿಯಾಗಿದ್ದು, ಇದರ ಪರಿಣಾಮವಾಗಿ ಕೇರಳ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ.