ಹೊಸದಿಗಂತ ಡಿಜಿಟಲ್ ಡೆಸ್ಕ್:
ದೀಪಾವಳಿ ಹಬ್ಬ ಸಮೀಪಿಸುತ್ತಿರುವ ಬೆನ್ನಲ್ಲೇ ದೆಹಲಿಯ ಆಪ್ ಸರ್ಕಾರವು ದೆಹಲಿಯಲ್ಲಿ ಪಟಾಕಿಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
ಪಟಾಕಿಗಳನ್ನು ತಯಾರಿಸುವುದು, ಸಂಗ್ರಹಿಸುವುದು, ಮಾರಾಟ ಮಾಡುವುದು 5,000 ರೂಪಾಯಿಗಳವರೆಗೆ ದಂಡ ಮತ್ತು ಸ್ಫೋಟಕ ಕಾಯ್ದೆಯ ಸೆಕ್ಷನ್ 9B ಅಡಿಯಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಲಿದೆ ಆಪ್ ಸರ್ಕಾರದ ಪರಿಸರ ಸಚಿವ ಗೋಪಾಲ್ ರೈ ಹೇಳಿದ್ದಾರೆ. ಅಲ್ಲದೇ ದೆಹಲಿಯಲ್ಲಿ ದೀಪಾವಳಿಯಂದು ಪಟಾಕಿ ಸಿಡಿಸಿದರೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 200 ರೂಪಾಯಿ ದಂಡ ವಿಧಿಸಲಾಗುವುದು ಎಂದು ರೈ ಬುಧವಾರ ಹೇಳಿದ್ದಾರೆ.
ಆಪ್ ಸರ್ಕಾರದ ಈ ನಿರ್ಧಾರವನ್ನು ದೆಹಲಿ ಬಿಜೆಪಿ ಖಂಡಿಸಿದ್ದು ಪಟಾಕಿ ನಿಷೇಧಿಸಿರುವ ಆಪ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ʼಹಿಂದುಗಳು ಪಟಾಕಿಯನ್ನು ಸಿಡಿಸಿದರೆ ಮಾತ್ರ ಮಾಲಿನ್ಯವಾಗುತ್ತದೆʼ ಎಂದು ಆಪ್ ಸರ್ಕಾರಕ್ಕೆ ಬಿಜೆಪಿ ಕುಟುಕಿದೆ ಎಂದು ಮೂಲಗಳು ವರದಿ ಮಾಡಿವೆ.