ಹೊಸ ದಿಗಂತ ಡಿಜಿಟಲ್ ಡೆಸ್ಕ್:
2023ರ ಬರುವ ಚುನಾವಣೆಯಲ್ಲಿ ಜೆಡಿಎಸ್ ಅನ್ನು ಗೆಲ್ಲಿಸಬೇಕು. ಜೆಡಿಎಸ್ ಒಂದು ಮುಳುಗುವ ಪಕ್ಷ ಎನ್ನುವ ಅಪಪ್ರಚಾರಕ್ಕೆ ಹೇಗೆ ಉತ್ತರ ಕೊಡಬೇಕೆಂದು ನನಗೆ ಗೊತ್ತಿದೆ ಎಂದು ಜೆಡಿಎಸ್ ನಾಯಕ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮೀಸಲಾತಿ ಬಗ್ಗೆ ಮಾತನಾಡುವ ಬಿಜೆಪಿ ಅಥವಾ ಕಾಂಗ್ರೆಸ್ ನಾಯಕರು ನನ್ನ ಮುಂದೆ ಬಂದು ನಿಲ್ಲಲಿ. ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ ಎಂದು ಅವರು, 2023ರವರೆಗೆ ಅವಿರತ ಹೋರಾಟ ನಡೆಸಲು ಸಂಕಲ್ಪ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ 123 ಸ್ಥಾನಗಳ ಗುರಿ ಇರಿಸಿಕೊಂಡಿದ್ದೇವೆ. ಕುಮಾರಸ್ವಾಮಿ ಹೋರಾಟಕ್ಕೆ ನಾವೆಲ್ಲ ಶಕ್ತಿ ತುಂಬೋಣ ಎಂದರು.
ನನ್ನಲ್ಲಿ ಅನುಭವದ ಕೊರತೆ ಇಲ್ಲ. ಪ್ರತಿಯೊಬ್ಬರಲ್ಲೂ ಶಕ್ತಿ ಇದೆ. ಮಾತನಾಡುವುದು ತುಂಬಾ ಇದೆ. ನಾನು ನನ್ನ ಹೋರಾಟವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ. ಕುಮಾರಸ್ವಾಮಿಗೆ ಶಕ್ತಿ ತುಂಬುತ್ತೇನೆ. 2023ರ ಚುನಾವಣೆಗೆ ಕುಮಾರಸ್ವಾಮಿ ಒಬ್ಬರೇ ಅಲ್ಲ ಎಲ್ಲರೂ ತಮ್ಮ ಶಕ್ತಿ ಅನುಸಾರ ಕೆಲಸ ಮಾಡಿದರೆ ಮಾತ್ರ ಯಶಸ್ಸು ಸಿಗಲು ಸಾಧ್ಯ ಎಂದು ಎಚ್.ಡಿ.ದೇವೇಗೌಡ ಹೇಳಿದರು.