ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳಕೊಲ್ಲಿಯಲ್ಲಿ ಕ್ಷಣ ಕ್ಷಣಕ್ಕೂ ವಿಲಕ್ಷಣ ಬದಲಾವಣೆ ಕಂಡುಬರುತ್ತಿದ್ದು, ಅಂಡಮಾನ್ ಪರಿಸರದಲ್ಲಿ ಹುಟ್ಟಿಕೊಂಡಿರುವ ಸುಳಿಗಾಳಿ ಇನ್ನಷ್ಟು ಪ್ರಬಲವಾಗುತ್ತಿದೆ. ಇದು ಕೆಲವೇ ಗಂಟೆಗಳಲ್ಲಿ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ ದಟ್ಟವಾಗಿದೆ.
ಈ ಹವಾಮಾನ ವೈಪರೀತ್ಯ ಅರಬ್ಬಿ ಸಮುದ್ರದ ಮೇಲೂ ಪ್ರಭಾವ ಬೀರುವ ಹಿನ್ನಲೆಯಲ್ಲಿ ಕರ್ನಾಟಕದ ಮೇಲೂ ಒಂದಿಷ್ಟು ಪರಿಣಾಮ ಕಾಣಿಸಲಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
ರಾಜ್ಯ ಹಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ನಾಳೆ (ಅ.21) ದಕ್ಷಿಣ ಒಳನಾಡು ಭಾಗದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದು ದಿನ ’ಹಳದಿ’ ಎಚ್ಚರಿಕೆ ನೀಡಲಾಗಿದೆ.
ಇನ್ನು ಉತ್ತರ ಒಳನಾಡು, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಮಾನ್ಯವಾಗಿ, ಕೆಲವೊಮ್ಮೆ ಧಾಕಾರಾರವಾಗಿ ಗುಡುಗು ಮಿಂಚು ಸಹಿತ ಮಳೆ ನಿರೀಕ್ಷಿಸಲಾಗಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ