ಹೊಸ ದಿಗಂತ ವರದಿ, ಕಲಬುರಗಿ:
ರಾಜ್ಯಾದ್ಯಂತ ಸುರಿಯುತ್ತಿರುವ ಮಹಾ ಮಳೆಯಿಂದಾಗಿ ಈಗಾಗಲೇ ಜನ ಜಾನುವಾರು ಅಕ್ಷರಶಃ ತತ್ತರಿಸಿ ಹೋಗಿದ್ದು, ಇದರ ಮಧ್ಯೆ ತೊಗರಿಯ ಕಣಜ ಕಲಬುರಗಿ ಜಿಲ್ಲೆಯಲ್ಲಿ ಪ್ರವಾಸ ಪರಿಸ್ಥಿತಿ ನಿಮಾ೯ಣವಾಗಿದೆ. ನೆರೆಯ ಮಹಾರಾಷ್ಟ್ರ ರಾಜ್ಯದಿಂದ ಅಪಾರ ಪ್ರಮಾಣದಲ್ಲಿ ನೀರು ಹರಿ ಬಿಡಲಾಗಿದೆ.
ಗುರುವಾರ ಸಂಜೆ ಮಹಾರಾಷ್ಟ್ರ ರಾಜ್ಯದಿಂದ ಭೀಮಾ ನದಿಗೆ 1.80 ಲಕ್ಷ ಕ್ಯೂಸೆಕ ನೀರು ಬಿಡುಗಡೆ ಮಾಡಿದ್ದು, ಭೀಮಾ ತೀರದಲ್ಲಿ ಪ್ರವಾಹದ ಆತಂಕ ಎದುರಾಗಿದೆ.ಇದರ ಜಿಲ್ಲಾಡಳಿತ ಹೈ ಅಲಟ್೯ ಘೋಷಣೆ ಮಾಡಿದೆ.
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ ನದಿ. ಬೃಹತ್ ಸೇತುವೆ ಮುಳುಗಡೆಯಿಂದ ಸಂಚಾರ ಸ್ಥಗೀತಗೊಂಡಿದೆ.ಮತ್ತೊಂದೆಡೆ ಮುಳುಗಡೆಯಾದ ಅಫಜಲಪುರ ತಾಲೂಕಿನ ಯಲ್ಲಮ್ಮ ದೇವಿ ದೇವಸ್ಥಾನ ಮುಳುಗಡೆ ಆಗಿ ಹೋಗಿದೆ.
ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ, ವೀರ್ ಜಲಾಶಯದಿಂದ ಅಫಜಲಪುರ ತಾಲೂಕಿನ ಸೊನ್ನ ಬ್ಯಾರೇಜ್‌ಗೆ 1.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದರಿಂದ ಭೀಮಾ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ, ಘತ್ತರಗಿ ಸೇತುವೆ ಮುಳುಗಡೆಯಾಗಿದೆ. ಹೀಗಾಗಿ ಕಲಬುರಗಿ ಮತ್ತು ವಿಜಯಪುರ ಜಿಲ್ಲೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇತ್ತ ಭೀಮಾ ನದಿಯಲ್ಲಿರೋ ಯಲ್ಲಮ್ಮ ದೇವಸ್ಥಾನ ಸಹ ಮುಳುಗಡೆಯಾಗಿದ್ದು, ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಇದರ ಜೊತೆಗೆ ಭೀಮಾ ತಟದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾದ ಹಿನ್ನಲೆಯಲ್ಲಿ ಜಿಲ್ಲಾಡಳಿತ ಕೂಡ ಹೈಅಲಾರ್ಟ್ ಘೋಷಿಸಿ ನದಿತಟದ ಜನ ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಿದೆ.
ಇನ್ನೂ ಕಲಬುರಗಿ ಜಿಲ್ಲೆಯ ಅಫಜಲಪುರ, ಚಿತ್ತಾಪುರ ಮತ್ತು ಜೇವರ್ಗಿ ತಾಲೂಕಿನಲ್ಲಿ ಭೀಮಾ ನದಿ ಹರಿಯುತ್ತಿದ್ದು, ನದಿ ತೀರದ ಜನರಲ್ಲಿ ಪ್ರವಾಹ ಆತಂಕ ಮನೆ ಮಾಡಿದೆ. ಸದ್ಯ ಅಫಜಲಪುರದ ಸೊನ್ನ ಬ್ಯಾರೇಜ್‌ಗೆ ಮಹಾರಾಷ್ಟ್ರದಿಂದ ನಿರಂತರವಾಗಿ ನೀರು ಹರಿಬಿಡ್ತಿರೋ ಪರಿಣಾಮ, ಭೀಮಾ ತೀರದ ಜನ ಮತ್ತೊಂದು ದೊಡ್ಡಮಟ್ಟದ ಪ್ರವಾಹ ಎದುರಾಗುವ ಆತಂಕ ಒಂದು ಕಡೆಯಾದರೆ, ಭೀಮಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ, ಸಾವಿರಾರು ಹೆಕ್ಟೇರ್ ಪ್ರದೇಶದ ಬೆಳೆಗಳು ಜಲಾವೃತವಾಗಿ ಬೆಳೆ ಕಳೆದುಕೊಳ್ಳುವ ಭೀತಿ ಎದುರಾಗಿದ್ದು, ರೈತರು ಮತ್ತೆ ಸಾಲದ ಸುಳಿಗೆ ಸಿಲುಕಿ ಸಂಕಷ್ಟಕ್ಕಿಡಾಗುವ ಆತಂಕ ಎದುರಾಗಿದೆ.