‘ಪುನೀತ್ ಪರ್ವ’ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ: ಅರಮನೆ ಮೈದಾನದಲ್ಲಿ ಸಿನಿತಾರೆಯರ ಸಮಾಗಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಪುನೀತ್ ರಾಜ್ ಕುಮಾರ್ ಅವರ ‘ ಪುನೀತ್ ಪರ್ವ ‘ ಕಾರ್ಯಕ್ರಮಕ್ಕೆ ಗ್ರ್ಯಾಂಡ್ ಓಪನಿಂಗ್ ಸಿಕ್ಕಿದೆ. ಕಾರ್ಯಕ್ರಮಕ್ಕಾಗಿ ಎಲ್ಲ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಸೇರಿದ್ದಾರೆ.
ವೇದಿಕೆಯಲ್ಲಿ ಮನರಂಜನಾ ಕಾರ್ಯಕ್ರಮಗಳ ಜೊತೆಗೆ ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ ನಡೆಯುತ್ತಿದೆ.
ಪುನೀತ್​ ರಾಜ್​ಕುಮಾರ್​ ಅವರಿಗೆ ಎಲ್ಲರೂ ಸೇರಿ ವಿಶೇಷ ರೀತಿಯಲ್ಲಿ ನಮನ ಸಲ್ಲಿಸುತ್ತಿದ್ದಾರೆ.
ಅಶ್ವಿನಿ ಪುನೀತ್​ ರಾಜ್​ಕುಮಾರ್​, ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ ಕುಮಾರ್​ ಸೇರಿದಂತೆ ಇಡೀ ಭಾರತ ಚಿತ್ರರಂಗದ ದಿಗ್ಗಜ ಗಣ್ಯರು ಭಾಗಿಯಾಗಿದ್ದಾರೆ.
ಭಾರತ ಚಿತ್ರರಂಗದ ಖ್ಯಾ ತ ಗಣ್ಯರು ಕಾರ್ಯಕ್ರಮಕ್ಕೆ ಧಾವಿಸಿದ್ದು ಅರ್ಮಾನ್ ಮಲ್ಲಿಕ್, ಗುರುಕಿರಣ್, ಕುನಾಲ್ ಗಾಂಜಾವಾಲಾ ರವರಿಂದ ಗಾಯನ ಕಾರ್ಯಕ್ರಮ ನಡೆಯಲಿದ್ದು, ರಮ್ಯಾ, ಶಿವರಾಜ್ ಕುಮಾರ್ ಸೇರಿದಂತೆ ಹಲವು ಸ್ಯಾಂಡಲ್ ವುಡ್ ನಟ ನಟಿಯರು ಹೆಜ್ಜೆ ಹಾಕಲಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!